ಮಡಿಕೇರಿ, ಏ.೧೩ : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ ೨೪ನೇ ವರ್ಷದ ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆಯಲ್ಲಿ ಕೂತಂಡ, ತೆಕ್ಕಡ, ಹಂಚೆಟ್ಟಿರ, ಮುಕ್ಕಾಟಿರ ತಂಡಗಳು ಸೇರಿದಂತೆ ೧೨ ತಂಡಗಳು ಮುನ್ನಡೆ ಸಾಧಿಸಿದವು.

ಮೈದಾನ ೧ ರಲ್ಲಿ ಕೊಲ್ಲಿರ (ಚೆಯ್ಯಂಡಾಣೆ) ಮತ್ತು ಕೂತಂಡ ತಂಡಗಳ ನಡುವಿನ ಪಂದ್ಯದಲ್ಲಿ ಕೂತಂಡಕ್ಕೆ ೧೦ ವಿಕೆಟ್‌ಗಳ ಭರ್ಜರಿ ಜಯ ಲಭಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಲ್ಲಿರ ೬ ಓವರ್‌ಗಳಲ್ಲಿ ೯ ವಿಕೆಟ್ ನಷ್ಟಕ್ಕೆ ೨೦ ರನ್ ಗಳಿಸಿತು. ಕೂತಂಡ ಕೇವಲ ೧.೪ ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ೨೩ ರನ್ ಸೇರಿಸಿ ವಿಜಯ ಸಾಧಿಸಿತು.

ಅಲ್ಲಂಗಡ ಮತ್ತು ಬಾಚಳ್ಳಿರ ನಡುವಿನ ಪಂದ್ಯದಲ್ಲಿ ಅಲ್ಲಂಗಡ ತಂಡಕ್ಕೆ ೮ ವಿಕೆಟ್ ಗಳ ಜಯ ದೊರೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಚಳ್ಳಿರ ೬ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೪೫ ರನ್ ಸೇರಿಸಿತು. ಅಲ್ಲಂಗಡ ತಂಡ ೨ ವಿಕೆಟ್ ನಷ್ಟಕ್ಕೆ ೪೯ ರನ್ ಗಳಿಸಿ ಗೆಲುವು ಸಾಧಿಸಿತು.

ತೆಕ್ಕಡ ಮತ್ತು ಕೊಟ್ಟುಕತ್ತಿರ ನಡುವಿನ ಪಂದ್ಯದಲ್ಲಿ ತೆಕ್ಕಡ ತಂಡಕ್ಕೆ ೧೦ ವಿಕೆಟ್‌ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೊಟ್ಟುಕತ್ತಿರ ತಂಡ ೬ ಓವರ್‌ಗಳಲ್ಲಿ ೭ ವಿಕೆಟ್ ನಷ್ಟಕ್ಕೆ ೩೪ ರನ್ ಗಳಿಸಿತು. ತೆಕ್ಕಡ ತಂಡ ೩ ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ೩೮ ರನ್ ಸೇರಿಸಿ ಪಂದ್ಯವನ್ನು ಗೆದ್ದುಕೊಂಡಿತು.

ಅಲ್ಲಪAಡ ಮತ್ತು ನಂದಿನೆರವAಡ ನಡುವಿನ ಪಂದ್ಯದಲ್ಲಿ ನಂದಿನೆರವAಡ ತಂಡಕ್ಕೆ ೬ ವಿಕೆಟ್‌ಗಳ ಜಯ ದೊರೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಲ್ಲಪಂಡ ತಂಡ ೬ ಓವರ್‌ಗಳಲ್ಲಿ ೭ ವಿಕೆಟ್ ನಷ್ಟಕ್ಕೆ ೭೦ ರನ್ ಗಳಿಸಿತು. ನಂದಿನೆರವAಡ ೫.೩ ಓವರ್‌ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೭೪ ರನ್ ಸೇರಿಸಿ ಜಯ ಸಾಧಿಸಿತು.

ಹಂಚೆಟ್ಟಿರ ಮತ್ತು ವಾಂಚಿರ ತಂಡಗಳ ನಡುವಿನ ಪಂದ್ಯದಲ್ಲಿ ಹಂಚೆಟ್ಟಿರ ತಂಡಕ್ಕೆ ೧೦ ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವಾಂಚಿರ ೬ ಓವರ್ ಗಳಲ್ಲಿ ೬ ವಿಕೆಟ್ ನಷ್ಟಕ್ಕೆ ೨೬ ರನ್ ಗಳಿಸಿತು. ಹಂಚೆಟ್ಟಿರ ತಂಡ ೨ ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ೨೮ ರನ್ ಸೇರಿಸಿ ಗೆಲುವು ಸಾಧಿಸಿತು.

ಮಂಡೆಯAಡ (ಮಾದಾಪುರ) ಮತ್ತು ಪಳೆಯಂಡ ನಡುವಿನ ಪಂದ್ಯದಲ್ಲಿ ಮಂಡೆಯAಡ ತಂಡ ೨೦ ರನ್ ಗಳಿಂದ ವಿಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮಂಡೆಯAಡ ೬ ಓವರ್‌ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೮೭ ರನ್ ಗಳಿಸಿತು. ಪಳೆಯಂಡ ೩ ವಿಕೆಟ್ ನಷ್ಟಕ್ಕೆ ೬೭ ರನ್ ಸೇರಿಸಿ ಸೋಲೊಪ್ಪಿಕೊಂಡಿತು.

ಮೈದಾನ ೨ರಲ್ಲಿ ಕೋಡಿರ ಮತ್ತು ಐಲಪಂಡ ತಂಡಗಳ ನಡುವಿನ ಪಂದ್ಯದಲ್ಲಿ ಐಲಪಂಡ ೧೧ ರನ್‌ಗಳಿಂದ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐಲಪಂಡ ೬ ಓವರ್‌ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೭೭ ರನ್ ಸೇರಿಸಿತು. ಕೋಡಿರ ೬ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೬೬ ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.

ಕಾಳಪಂಡ ಮತ್ತು ಕನ್ನಿಗಂಡ ತಂಡಗಳ ನಡುವಿನ ಪಂದ್ಯದಲ್ಲಿ ಕನ್ನಿಗಂಡ ೯ ವಿಕೆಟ್ ಗಳ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕಾಳಪಂಡ ೬ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೫೧ ರನ್ ಗಳಿಸಿತು. ಕನ್ನಿಗಂಡ ಕೇವಲ ೨.೩ ಓವರ್ ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೫೬ ರನ್ ಸೇರಿಸಿ ಜಯ ಕಂಡಿತು.

ಮುದ್ದAಡ ಮತ್ತು ಬಲ್ಯಮೀದೇರಿರ ನಡುವಿನ ಹಣಾಹಣಿಯಲ್ಲಿ ಬಲ್ಯಮೀದೇರಿರ ೬ ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮುದ್ದಂಡ ೬ ಓವರ್‌ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೬೦ ರನ್ ಸೇರಿಸಿತು. ಬಲ್ಯಮೀದೇರಿರ ೬ ಓವರ್‌ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೬೧ ರನ್ ಗಳಿಸಿ ಜಯ ಸಾಧಿಸಿತು.

ನಾಗಚೆಟ್ಟಿರ ಮತ್ತು ಮುಕ್ಕಾಟಿರ (ಕುಂಜಿಲಗೇರಿ) ತಂಡಗಳ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ತಂಡಕ್ಕೆ ೯ ವಿಕೆಟ್‌ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನಾಗಚೆಟ್ಟಿರ ೬ ಓವರ್‌ಗಳಲ್ಲಿ ೬ ವಿಕೆಟ್ ನಷ್ಟಕ್ಕೆ ೫೬ ರನ್ ಗಳನ್ನು ಸೇರಿಸಿತು. ಮುಕ್ಕಾಟಿರ ೬ ಓವರ್ ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೫೭ ರನ್ ಗಳನ್ನು ಗಳಿಸಿ ಗೆಲುವಿನ ನಗು ಬೀರಿತು.

ಮುಕ್ಕಾಟಿರ (ಮೂವತ್ತೊಕ್ಲು) ಮತ್ತು ನಾಪಂಡ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ತಂಡ ಭರ್ಜರಿ ೧೦ ವಿಕೆಟ್ ಗÀಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನಾಪಂಡ ೬ ಓವರ್ ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೫೬ ರನ್ ಸೇರಿಸಿತು. ಮುಕ್ಕಾಟಿರ ೩.೩ ಓವರ್ ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೫೭ ರನ್ ಗಳಿಸಿ ಗೆಲುವಿನ ನಗು ಬೀರಿತು.

ಮರುವಂಡ ಮತ್ತು ಮಂಡAಗಡ ತಂಡಗಳ ನಡುವಿನ ಪಂದ್ಯದಲ್ಲಿ ಮಂಡAಗಡ ತಂಡಕ್ಕೆ ೬೩ ರನ್‌ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಂಡAಗಡ ೬ ಓವರ್‌ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೧೧೪ ರನ್ ಗಳನ್ನು ಸೇರಿಸಿತು. ಮರುವಂಡ ೬ ಓವರ್ ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೫೨ ರನ್ ಗಳನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು.