ಪೊನ್ನಂಪೇಟೆ, ಏ. ೧೩: ಪೊನ್ನಂಪೇಟೆ ತಾಲೂಕಿನ ಬೇಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ೭೫ ವರ್ಷ ತುಂಬಿದ ಹಿನ್ನೆಲೆಯಲ್ಲಿ, ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಮೂರು ದಿನಗಳ ಕಾಲ ವಿಜೃಂಭಣೆಯಿAದ ಆಚರಿಸಲಾಯಿತು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕೇಚೆಟ್ಟೀರ ಅರುಣ್ ಅಪ್ಪಣ್ಣ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಧಾನ ಪರಿಷತ್ ಸದಸ್ಯ ಮಂಡೆಪAಡ ಸುಜಾ ಕುಶಾಲಪ್ಪ ಅವರು ದೀಪಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದ ಪ್ರತಿಯೊಬ್ಬರು ಶಿಕ್ಷಣ ಪಡೆದರೆ ಮಾತ್ರ ದೇಶ ಅಭಿವೃದ್ಧಿ ಕಾಣಲು ಸಾಧ್ಯ. ಆದ್ದರಿಂದ ಸರ್ಕಾರ ಸರ್ಕಾರಿ ಶಾಲೆಗಳ ಉನ್ನತಿಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿತ ಬಹುತೇಕ ವಿದ್ಯಾರ್ಥಿಗಳು ಇಂದು ದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಶಿಕ್ಷಣ ಪ್ರತಿಯೊಬ್ಬರಿಗೂ ತಲುಪಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಬೇಗೂರು ಗ್ರಾಮಸ್ಥರು ತಮ್ಮ ಊರಿನ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ತಮ್ಮ ಮನೆಯ ಕಾರ್ಯಕ್ರಮ ಎಂಬAತೆ ಸಂಭ್ರಮದಿAದ ಪಾಲ್ಗೊಂಡಿರುವುದು ವಿಶೇಷ ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಮೂಕಳೇರ ಕುಶಾಲಪ್ಪ್ಪ ಮಾತನಾಡಿ, ಸ್ಥಳೀಯರು ತಮ್ಮ ಗ್ರಾಮದ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಆಗ ಮಾತ್ರ ಸರ್ಕಾರಿ ಶಾಲೆಗಳ ಉಳಿವು ಸಾಧ್ಯ ಎಂದರು.

ಕರ್ನಾಟಕ ಸರ್ಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕ ತೀತಿರ ರೋಷನ್ ಅಪ್ಪಚ್ಚು ಮಾತನಾಡಿ ಭಾರತೀಯ ಸೈನ್ಯ ಹಾಗೂ ಪೊಲೀಸ್ ಇಲಾಖೆಯಲ್ಲಿ ಹಿಂದೆ ಕೊಡಗಿನವರು ಹೆಚ್ಚಿನ ಸಂಖ್ಯೆಯಲ್ಲಿ ೪ಆರನೇ ಪುಟಕ್ಕೆ

(ಮೊದಲ ಪುಟದಿಂದ) ಇರುತ್ತಿದ್ದರು. ಈಗ ಕಡಿಮೆ ಆಗಿದೆ. ಪೋಷಕರು ತಮ್ಮ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರು ಮಾಡಿ, ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೆ. ಎಲ್. ರುಕ್ಮಿಣಿ ಮಾತನಾಡಿ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬೇಗೂರು ಗ್ರಾಮಸ್ಥರು ಹಾಗೂ ಶಾಲೆಯ ಶಿಕ್ಷಕಿಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬೇಗೂರು ಗ್ರಾಮ ವ್ಯಾಪ್ತಿಯ ಭಾರತೀಯ ಸೇನೆ ಯೋಧರು, ನಿವೃತ್ತ ಯೋಧರು ಹಾಗೂ ಶಾಲೆಯ ನವೀಕರಣಕ್ಕೆ ಸಹಾಯ ಮಾಡಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭ ಶಾಲೆಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹೊರತರಲಾಗಿರುವ ಅಮೃತಧಾರೆ ಸ್ಮರಣೆ ಸಂಚಿಕೆಯನ್ನು ಅತಿಥಿಗಳು ಬಿಡುಗಡೆ ಮಾಡಿದರು. ಬೇಗೂರು ಶಾಲೆ ಮುಖ್ಯ ಶಿಕ್ಷಕಿ ಸುಜಾತ ಶಾಲಾ ವರದಿ ವಾಚಿಸಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕೇಚೆಟ್ಟೀರ ಅರುಣ್ ಅಪ್ಪಣ್ಣ ಅಮೃತ ಮಹೋತ್ಸವ ಕಾರ್ಯಕ್ರಮಗಳ ವರದಿ ವಾಚಿಸಿದರು. ಈ ಸಂದರ್ಭ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಪಿ. ಎಂ. ಕಾವೇರಿ, ಕಿಗ್ಗಟ್ ನಾಡ್ ಹಿರಿಯ ನಾಗರೀಕ ವೇದಿಕೆ ಸ್ಥಾಪಕ ಕಾಟಿಮಾಡ ಜಿಮ್ಮಿ ಅಣ್ಣಯ್ಯ, ಅಮೃತ ಮಹೋತ್ಸವ ಸಮಿತಿಯ ಕಾರ್ಯದರ್ಶಿ ಮತ್ರಂಡ ರಾಜ ಮುತ್ತಪ್ಪ, ಉಪಾಧ್ಯಕ್ಷರಾದ ಕಾಯಪಂಡ ಕಂಠಿ ಕರುಂಬಯ್ಯ, ಕೇಚೆಟ್ಟಿರ ಲಲಿತ, ಬಿಆರ್‌ಪಿ ವಾಮನ, ಸಿಆರ್‌ಪಿ ಕೋಪುಡ ಸೌಮ್ಯ, ಬೆಂಗಳೂರು ಕೊಡವ ಸಂಘದ ಅಧ್ಯಕ್ಷೆ ಬೆಂಜAಡ ಸುಶೀಲ ಮಾಚಯ್ಯ, ಬೇಗೂರು ಶಾಲೆ ಸಹ ಶಿಕ್ಷಕಿಯರಾದ ಅನಿತ ಕುಮಾರಿ, ರಸೀನ, ಅಮೃತ ಮಹೋತ್ಸವ ಸಮಿತಿ ಸದಸ್ಯರು, ದಾನಿಗಳು, ವಿವಿಧ ಶಾಲೆಗಳ ಶಿಕ್ಷಕರು, ಹಾಗೂ ಬೇಗೂರು ಗ್ರಾಮಸ್ಥರು ಹಾಜರಿದ್ದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕಳಂಚೇರಿ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಕಾರ್ಯಕ್ರಮಕ್ಕೆ ಶುಭಕೋರಿ ಆಶೀರ್ವಚನ ನೀಡಿದರು.

ಸಂಜೆ ಶ್ರೀ ದುರ್ಗಾ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು. ಝೀ ಕನ್ನಡ ಸರಿಗಮಪ ಖ್ಯಾತಿಯ ಅನ್ವಿತ್ ಕುಮಾರ್ ಬಾಳೆಲೆ ಹಾಗೂ ತನುಶ್ರೀ ಮಂಗಳೂರು ಅವರ ಗೀತಾ ಗಾಯನ ಕಾರ್ಯಕ್ರಮ ನೆರೆದಿದ್ದವರನ್ನು ರಂಜಿಸಿತು.

ಬೆAಜAಡ ಬಿಂಬಿಕ ಪ್ರಾರ್ಥಿಸಿ, ಮತ್ರಂಡ ರಾಜ ಮುತ್ತಪ್ಪ ಸ್ವಾಗತಿಸಿ, ಕೇಚೆಟ್ಟಿರ ಲಲಿತ ವಂದಿಸಿ, ಶಿಕ್ಷಕಿ ಅನಿತ ಕುಮಾರಿ ಹಾಗೂ ಕೊಟ್ಟಂಗಡ ರಾಜ ಸುಬ್ಬಯ್ಯ ಕಾರ್ಯಕ್ರಮ ನಿರೂಪಿಸಿದರು.

ಅಮೃತ ಮಹೋತ್ಸವದ ಅಂಗವಾಗಿ ಬೇಗೂರು ಶಾಲಾ ಮೈದಾನದಲ್ಲಿ ಮೂರು ದಿನಗಳವರೆಗೆ ವಿವಿಧ ಕ್ರೀಡೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಮೂರು ದಿನಗಳವರೆಗೆ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಬೇಗೂರು ಗ್ರಾಮಸ್ಥರು ಪಾಲ್ಗೊಂಡು ಸಂಭ್ರಮಿಸಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಜೆ ಕೋಳೆರ ಸನ್ನು ಕಾವೇರಪ್ಪ ನೇತೃತ್ವದ ಎಂಗ ಕೊಡವ ತಂಡದವರು ಪ್ರದರ್ಶನ ಮಾಡಿದ ಕೊಡವ ನಾಟಕ ಕುರ್ಕಂಗ ನೆರೆದಿದ್ದವರನ್ನು ನಗೆಗಡಲಲ್ಲಿ ತೇಲಿಸಿತು.

ವರದಿ: ಚನ್ನನಾಯಕ