ಮಡಿಕೇರಿ, ಏ. ೧೩: ಚೇರಂಬಾಣೆ ವ್ಯಾಪ್ತಿಯ ಬೇಂಗೂರು ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಪುನರ್ ಪ್ರತಿಷ್ಠಾ ಹಾಗೂ ಬ್ರಹ್ಮಕಲಶೋತ್ಸವ ಭಕ್ತಿಭಾವದೊಂದಿಗೆ ನೆರವೇರಿತು.
ಚೇರಂಬಾಣೆಯಲ್ಲಿನ ಪಟ್ಟಮಾಡ ಕುಟುಂಬದ ಬೇಂಗೂರು ಗ್ರಾಮದಲ್ಲಿರುವ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪುನರ್ ನಿರ್ಮಾಣವಾದ ನೂತನ ಪ್ರಾಸಾದದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಪಂಚಲೋಹ ಬಿಂಬ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶಾಭಿಷೇಕವು ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಪಟ್ಟಮಾಡ ಕುಟುಂಬದ ಮುಂದಾಳತ್ವದಲ್ಲಿ ಆಯೋಜಿತವಾಗಿತ್ತು.
ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಎಂ.ಪಿ. ಮನು ಮೇದಪ್ಪ, ಮಡಿಕೇರಿಯ ಶ್ರೀ ಕುಂದುರುಮೊಟ್ಟೆ ದೇವಾಲಯದ ಟ್ರಸ್ಟಿ ಟಿ.ಪಿ. ರಮೇಶ್, ಮನು ಮೇದಪ್ಪ, ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ ಟ್ರಸ್ಟಿ ಜಿ.ಚಿದ್ವಿಲಾಸ್, ಐತ್ತಪ್ಪ ರೈ, ಮುಡಾ ಅಧ್ಯಕ್ಷ ರಾಜೇಶ್ ಬಿ.ವೈ., ಪಟ್ಟಮಾಡ ಕುಟುಂಬದ ಪಟ್ಟೆದಾರ ಡಿಕ್ಕಾ ಕಾಳಪ್ಪ, ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ಪಟ್ಟಮಾಡ ಬೋಪಣ್ಣ, ಪಿ.ಡಿ. ಪೊನ್ನಪ್ಪ ಹಾಗೂ ಇತರರು ಪಾಲ್ಗೊಂಡಿದ್ದರು.