ಮಡಿಕೇರಿ, ಏ. ೧೪; ಮಡಿಕೇರಿ ದಸರಾ ಕ್ರೀಡಾ ಸಮಿತಿ ಹಾಗೂ ಕೊಡಗು ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ ಇಲ್ಲಿನ ಹೊಟೇಲ್ ರಾಜ್ದರ್ಶನ್ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ಜಯಂತಿ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೇರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಗರ ಸಭಾ ಅಧ್ಯಕ್ಷೆ ಪಿ.ಕಲಾವತಿ, ಸದಸ್ಯರಾದ ಸಬಿತಾ, ಮನ್ಸೂರ್, ಬಶೀರ್, ಶಕ್ತಿ ಪತ್ರಿಕೆ ಸಂಪಾದಕ ಜಿ.ಚಿದ್ವಿಲಾಸ್, ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್, ರವಿ ಕರ್ಕೇರ, ಮನು ಮಂಜುನಾಥ್, ಉಮೇಶ್, ಹರೀಶ್ ಆಚಾರ್ಯ ಸೇರಿದಂತೆ ಪ್ರಮುಖರು ಹಾಜರಿದ್ದರು.
ಶಿಬಿರದಲ್ಲಿ ದಾನಿಗಳಿಂದ ಒಟ್ಟು ೫೦ ಯೂನಿಟ್ ರಕ್ತ ಸಂಗ್ರಹ ಮಾಡಲಾಯಿತು. ನಗರ ಸಭಾ ಸದಸ್ಯ ಬಶೀರ್ ಕೂಡ ರಕ್ತದಾನ ಮಾಡಿದರು.