ಕೂಡಿಗೆ, ಏ. ೧೪: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು - ಸಂಯಮ, ಉತ್ತಮ ನಾಯಕತ್ವ ಗುಣ, ರಾಷ್ಟಿçÃಯ ಭಾವೈಕ್ಯತೆ, ಸೌಹಾರ್ದ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ ಹೇಳಿದರು.

ಕೂಡಿಗೆ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಅಂಜೆಲಾ ವಿದ್ಯಾನಿಕೇತನ ಶಾಲೆಯ ಸಂಯುಕ್ತಾಶ್ರಯದಲ್ಲಿ ಶಾಲೆಯ ಕಬ್ಸ್ ಮತ್ತು ಬುಲ್ ಬುಲ್ಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂತಹ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಬೆಳೆಸಲು ಸಹಕಾರಿಯಾಗಿವೆ.

ಎಲ್ಲಾ ಶಾಲೆಗಳಲ್ಲಿಯೂ ಸ್ಕೌಟ್ಸ್ ಮತ್ತು ಗೈಡ್ಸ್ನ ಚಟುವಟಿಕೆ ಪ್ರಾರಂಭಿಸಬೇಕು. ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ಗೆ ಸೇರ್ಪಡೆಗೊಳ್ಳಲು ಮುಂದಾಗಬೇಕು ಎಂದು ಡಾ. ಪ್ರವೀಣ್ ದೇವರಗುಂಡ ಸಲಹೆ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಬೆಳೆದುಬಂದ ದಾರಿ ಹಾಗೂ ಚಳುವಳಿ ಕುರಿತು ಮಾಹಿತಿ ನೀಡಿದ ಶಾಲಾ ಸಂಸ್ಥಾಪನಾ ಮುಖ್ಯೋಪಾಧ್ಯಾಯಿನಿಯೂ ಆಗಿದ್ದ ಲೀಡರ್ಸ್ ತರಬೇತುದಾರ(ಎಲ್.ಟಿ.)ರಾದ ಸಿಸ್ಟರ್ ಬೆನ್ ವಿಟಾ ಮಾತನಾಡಿ, ಶಾಲಾ ರಜಾ ದಿನಗಳಲ್ಲಿ ನಡೆಸುವ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಪಠ್ಯ ಬೋಧನೆ ಮಾಡದೆ ಅವರ ಮನೋವಿಕಾಸಕ್ಕೆ ಪೂರಕವಾಗಿ ಪಠ್ಯೇತರ ಚಟುವಟಿಕೆಗಳನ್ನು ನಡೆಸಿದಾಗ ವಿದ್ಯಾರ್ಥಿಗಳು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಶಿಬಿರ ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಅನಿತಾ ಡಿಸೋಜಾ, ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉತ್ತಮ ತರಬೇತಿ ಹೊಂದಿ ಉತ್ತಮ ವ್ಯಕ್ತಿತ್ವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ರಾಷ್ಟಿçÃಯ ಭಾವೈಕ್ಯತೆಯನ್ನು ಎತ್ತಿಹಿಡಿಯಬೇಕು ಎಂದರು.

ಬೇಸಿಗೆ ಶಿಬಿರದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಗೈಡ್ಸ್ನ ಸಹಾಯಕ ಆಯುಕ್ತೆ ಸಿ.ಎಂ. ಸುಲೋಚನಾ, ಶಿಬಿರದಲ್ಲಿ ಮಕ್ಕಳಿಗೆ ಕಲಿಸುವ ವಿಚಾರಗಳ ಕುರಿತು ಮಾಹಿತಿ ನೀಡಿದರು.

ಸ್ಕೌಟ್ಸ್ನ ಮುಖ್ಯ ತತ್ವಗಳು ಹಾಗೂ ತರಬೇತಿಯ ವಿವಿಧ ಚಟುವಟಿಕೆಗಳ ಕುರಿತು ವಿವರಿಸಿದ ಜಿಲ್ಲಾ ಸ್ಕೌಟ್ಸ್ ವಿಭಾಗದ ತರಬೇತಿ ಆಯುಕ್ತ ಕೆ.ಯು. ರಂಜಿತ್, ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕೆಂದರು.

ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ತಮ್ಮಯ್ಯ, ಕಾರ್ಯದರ್ಶಿ ಎಂ.ಎಸ್. ಗಣೇಶ್, ಸಹ ಕಾರ್ಯದರ್ಶಿ ಡಿ.ವಿ. ಗಣೇಶ್, ಖಜಾಂಚಿ ಎನ್.ಎಸ್. ನರೇಶ್ ಕುಮಾರ್, ಸದಸ್ಯ ವಸಂತ, ಕಬ್ಸ್ ಮತ್ತು ಬುಲ್ ಬುಲ್ಸ್ ವಿಭಾಗದ ಕಮಿಷನರ್ ಡೈಸಿ ಫ್ರಾನ್ಸಿಸ್, ಗೈಡ್ ಕ್ಯಾಪ್ಟನ್ ಆಶಾ, ಸ್ಕೌಟ್ ಮಾಸ್ಟರ್ ಎಸ್.ಎಚ್. ವಸಂತ , ಫ್ಲಾಕ್ ಲೀಡರ್ ಭವ್ಯ, ಲೇಡಿ ಕಬ್ ಮಾಸ್ಟರ್ ಪಲ್ಲವಿ, ಫಾತಿಮಾ ಪ್ರೌಢ ಶಾಲೆಯ ಗೈಡ್ ಕ್ಯಾಪ್ಟನ್ ಶಿಫಾನತ್, ಗೈಡ್ ವಿದ್ಯಾರ್ಥಿಗಳು ಮಡಿಕೇರಿ ಮುಕ್ತ ದಳ ಬುಲ್ ಬುಲ್ ಕಬ್ಸ್ ವಿದ್ಯಾರ್ಥಿಗಳು ಅಂಜೆಲಾ ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಕಬ್ಸ್ ಮತ್ತು ಬುಲ್ ಬುಲ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ನ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಇದೇ ವೇಳೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಉತ್ತಮ ಸೇವೆ ಸಲ್ಲಿಸಿದ ಸಂಸ್ಥೆಯ ಜಿಲ್ಲಾ ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ. ಸುಲೋಚನಾ ಹಾಗೂ ಲೀಡರ್ಸ್ ತರಬೇತುದಾರ(ಎಲ್.ಟಿ)ರಾದ ಸಿಸ್ಟರ್ ಬೆನ್ ವಿಟಾ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.