ಸಿದ್ದಾಪುರ, ಏ. ೧೪: ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಮೀನುಕೊಲ್ಲಿ ಶಾಖೆಯ ನೆಲ್ಲಿಹುದಿಕೇರಿ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಿರುವ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ತಾ. ೧೫ ರಂದು (ಇಂದು) ಬೆಳಗಿನಿಂದ ಸಂಜೆವರೆಗೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಕಾಫಿ ತೋಟದ ಮಾಲೀಕರು, ಕಾರ್ಮಿಕರು ಶಾಲಾ-ಕಾಲೇಜು ಮಕ್ಕಳು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹಾಗೂ ಕಾರ್ಯಾಚರಣೆಗೆ ಅರಣ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್ ಎನ್. ನಗರ್ ಮನವಿ ಮಾಡಿದ್ದಾರೆ.