ಮಡಿಕೇರಿ, ಏ. ೧೪: ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ ಎಂಬುದನ್ನು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಾರಿದ್ದಾರೆ. ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲು ಶ್ರಮಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕರೆ ನೀಡಿದರು.

ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯುವ ಜನರು ಉನ್ನತ ಶಿಕ್ಷಣ ಪಡೆದು ವಿವಿಧ ಕ್ಷೇತ್ರದಲ್ಲಿ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು. ಆ ನಿಟ್ಟಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರಂತೆ ನಿರಂತರ ಹಾಗೂ ಕಠಿಣ ಪರಿಶ್ರಮ ಅಗತ್ಯ. ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಮೇಲೆ ಬರಲು ಶ್ರಮ ವಹಿಸಬೇಕು. ಪರಿಶ್ರಮ ಇಲ್ಲದೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಅಸಾಧ್ಯ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಗುರಿ, ಉದ್ದೇಶ, ಆಶಯ, ಸಾಧನೆ ಇವುಗಳನ್ನು ಅರ್ಥ ಮಾಡಿಕೊಂಡು ಪ್ರತಿಯೊಬ್ಬರೂ ಮುನ್ನಡೆಯಬೇಕು. ಪ್ರತಿ ದಿನವೂ ಅಂಬೇಡ್ಕರ್ ಅವರನ್ನು ಸ್ಮರಿಸಬೇಕು ಎಂದು ಶಾಸಕರು ಸಲಹೆ ಮಾಡಿದರು.

ಅಂಬೇಡ್ಕರ್ ಅವರು ಬರೆದ ಸಂವಿಧಾನದ ಪ್ರತಿಫಲವಾಗಿ ನಾವು ವಿದ್ಯೆ, ಉದ್ಯೋಗ ಪಡೆದು, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದೇವೆ. ಇದೇ ಮೇ ಅಂತ್ಯದ ವೇಳೆಗೆ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಮಾಡಲು ಪ್ರಯತ್ನಿಸಲಾಗುವುದು, ಈ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ನಡೆಸಿ, ಕಾರ್ಯಕ್ರಮ ಯಶಸ್ಸಿಗೆ ಕೋರಲಾಗುವುದು ಎಂದು ಶಾಸಕರು ತಿಳಿಸಿದರು.

ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿ, ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್. ಅಂಬೇಡ್ಕರ್ ಅವರು ಜಾತಿ, ಧರ್ಮ ಮೀರಿ ಬೆಳೆದ ಅಪ್ರತಿಮ ಪ್ರತಿಭೆ; ಅಂಬೇಡ್ಕರ್ ಎಂದರೆ ಐಕಾನ್ ಹಾಗೂ ಐಡಿಯಾಲಜಿ ಎಂದರೆ ಅತಿಶಯೋಕ್ತಿಯಲ್ಲ, ಆ ನಿಟ್ಟಿನಲ್ಲಿ ಅವರ ಸಿದ್ದಾಂತ, ದೂರದೃಷ್ಟಿ ಮುಂದೆಯೂ ಪ್ರಸ್ತುತವಾಗಿರುತ್ತದೆ ಎಂದು ನುಡಿದರು.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಎಚ್.ಕೆ. ವೀರಣ್ಣಗೌಡ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಸಂದೀಪ್ ಎಸ್. ರಾವಣಿಕರ್ ಮಾತನಾಡಿ, ಸಂವಿಧಾನ ಶಿಲ್ಪಿ, ಭಾರತ ರತ್ನ, ವಿಶ್ವಜ್ಞಾನಿ ಅಂಬೇಡ್ಕರ್ ಅವರ ವಿಚಾರಧಾರೆಗಳು ಸಾರ್ವಕಾಲಿಕ ಎಂದು ಒತ್ತಿ ಹೇಳಿದರು. ಸ್ವಾತಂತ್ರ‍್ಯ ಪೂರ್ವ ಮತ್ತು ಸ್ವಾತಂತ್ರ‍್ಯ ನಂತರ ರಾಷ್ಟçದ ಬೆಳವಣಿಗೆ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ)ಬಗ್ಗೆ ಅವಲೋಕನ ಮಾಡಬೇಕಿದೆ. ವಿಶ್ವದಲ್ಲಿ ಅಮೇರಿಕಾ ಕ್ರಾಂತಿ, ಫ್ರೆಂಚ್ ಕ್ರಾಂತಿ ಹಾಗೂ ರಷ್ಯಾ ಕ್ರಾಂತಿ ಹಾಗೂ ಚೀನಾ ಕ್ರಾಂತಿ ಬಗ್ಗೆ ಅಧ್ಯಯನ ಮಾಡಿದ್ದೇವೆ, ಆ ದಿಸೆಯಲ್ಲಿ ಈ ಎಲ್ಲಾ ರಾಷ್ಟçಗಳು ಮುಂದುವರೆದಿವೆ. ಆದರೆ ೧೯೪೭ ರಲ್ಲಿ ಸ್ವಾತಂತ್ರö್ಯ ಪಡೆದ ಭಾರತ ಇಂದಿಗೂ ಸಹ ಮುಂದುವರೆಯುತ್ತಿರುವ ರಾಷ್ಟçವಾಗಿದೆ. ಈ ಬಗ್ಗೆ ಪ್ರತಿಯೊಬ್ಬರೂ ಯೋಚಿಸಬೇಕಿದೆ ಎಂದು ಹೇಳಿದರು.

ಕಲಾವಿದ ಈ. ರಾಜು ಮತ್ತು ತಂಡದವರು ಅಂಬೇಡ್ಕರ್ ಕುರಿತು ಹಾಡಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳನ್ನು ಗೌರವಿಸಲಾಯಿತು, ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹ ಧನದ ಚೆಕ್‌ಅನ್ನು ಇದೇ ಸಂದರ್ಭ ನೀಡಲಾಯಿತು.

ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಗ್ಯಾರಂಟಿ ಯೋಜನೆ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಪ್ರಮುಖರಾದ ಟಿ.ಪಿ. ರಮೇಶ್, ಜನಾಧÀðನ, ಎಚ್.ಎಲ್. ದಿವಾಕರ, ಪ್ರೇಮಕುಮಾರ್, ನಗರಸಭೆ ಸದಸ್ಯರಾದ ಸತೀಶ್, ಚಂದ್ರಶೇಖರ್, ಮುದ್ದುರಾಜು, ಜುಲೇಕಾಬಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶಿಲ್ದಾರರಾದ ಶ್ರೀಧರ, ಪ್ರಮುಖರಾದ ದೀಪಕ್ ಪೊನ್ನಪ್ಪ, ಪ್ರೇಮ ಕೃಷ್ಣ, ಸಿದ್ದೇಶ್, ಯಶೋಧ, ವಿನಯ ಕುಮಾರ್, ದೇವರಾಜು, ಗಣೇಶ್, ಸುದರ್ಶನ, ಕುಮಾರ, ಸುಧೀರ್, ವಾಸು, ಸಂದೀಪ್, ಪಾಲಾಕ್ಷ, ವೀರೇಂದ್ರ, ಕಿರಣ್, ಮುತ್ತಪ್ಪ, ಹರೀಶ್, ಎಸ್. ಹೊನ್ನೇಗೌಡ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಇದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಸ್ವಾಗತಿಸಿದರು, ರಮೇಶ್ ನಿರೂಪಿಸಿದರು, ಬಾಲಕೃಷ್ಣ ರೈ ವಂದಿಸಿದರು.

ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಕಾವೇರಿ ಕಲಾಕ್ಷೇತ್ರ ಬಳಿಯಿಂದ ಗಾಂಧಿ ಭವನದವರೆಗೆ ಮೆರವಣಿಗೆ ನಡೆಯಿತು.