ಮಡಿಕೇರಿ, ಏ. ೧೫: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ‘೭ನೇ ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ ತಾ. ೧೬ ರಂದು (ಇಂದು) ಬೆಳಿಗ್ಗೆ ೧೧.೩೦ ಗಂಟೆಗೆ ಸುಂಟಿಕೊಪ್ಪ ಕೊಡವ ಸಮಾಜದಲ್ಲಿ ನಡೆಯಲಿದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಅವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದು, ಸುಂಟಿಕೊಪ್ಪ ಕೊಡವ ಸಮಾಜದ ಅಧ್ಯಕ್ಷರಾದ ಚೇಂದ್ರಮಡ ಕರುಂಬಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯರು ಹಾಗೂ ಸಮಾಜ ಸೇವಕರಾದ ಪುಡಿಯಂಡ ಮುತ್ತಣ್ಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.