ವೀರಾಜಪೇಟೆ, ಏ.೧೫ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆ ಪ್ರಯುಕ್ತ, ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು, ವೀರಾಜಪೇಟೆಯ ಅಂಬೇಡ್ಕರ್ ಭವನಕ್ಕೆ ತೆರಳಿ, ಡಾ ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ವಂದಿಸಿದರು.
ಈ ಸಂದರ್ಭದಲ್ಲಿ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಪ್ರವೀಣ್ ಕುಮಾರ್, ವೀರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ನಾಚಪ್ಪ, ಪ್ರಮುಖರಾದ ಸತೀಶ್, ಮಹಾದೇವ, ಉದಯ, ರಾಜ, ಮಂಜುನಾಥ್, ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.