ಐಗೂರು, ಏ. ೧೫: ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ ೧೩೫ನೇ ಜಯಂತಿಯನ್ನು ಐಗೂರಿನ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದಿಂದ ಆಚರಿಸಲಾಯಿತು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಪ್ರಾಂಶುಪಾಲರಾದ ಉಮೇಶ್ ಅವರು ಮಾತನಾಡಿ, ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ದಲಿತರು ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದರು. ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಯಶ್ವಂತ್ ಕುಮಾರ್ , ಶಿಕ್ಷಕರಾದ ಕೃಷ್ಣಪ್ಪ, ಮಂಜುನಾಥ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.