ಮುಳ್ಳೂರು, ಏ. ೧೫: ಇಲ್ಲಿನ ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಪೂಜಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಸೋಮವಾರ ದೇವರಿಗೆ ಹೂವಿನ ಅಭಿಷೇಕ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸುವ ಮೂಲಕ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಸಂಜೆ ೬ ಗಂಟೆಗೆ ಮುಳ್ಳೂರು ಜಂಕ್ಸನ್ನಲ್ಲಿರುವ ಅರಳಿಕಟ್ಟೆಯಿಂದ ವಾದ್ಯಗೋಷ್ಠಿ ಸಹಿತ ಮಹಿಳೆಯರು ಕುಂಭ ಕಳಸದೊಂದಿಗೆ ಅಡ್ಡಪಲ್ಲಕ್ಕಿ ಮೆರವಣಿಗೆ ಗ್ರಾಮದ ಮುಖ್ಯಬೀದಿಗಳಲ್ಲಿ ಸಾಗಿತು. ನಂತರ ಅಡ್ಡಪಲ್ಲಕ್ಕಿ ಮೆರವಣಿಗೆ ಬಸವೇಶ್ವರ ದೇವಸ್ಥಾನವನ್ನು ತಲುಪಿ ದೇವಸ್ಥಾನದಲ್ಲಿ ಮೂರು ಪ್ರದಕ್ಷಿಣೆ ಹಾಕಿದ ನಂತರ ಶ್ರೀ ಬಸವೇಶ್ವರ ಸ್ವಾಮಿಯ ಮೂರ್ತಿಯನ್ನು ದೇವಸ್ಥಾನದಲ್ಲಿ ಇರಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಂಗಳವಾರ ಬೆಳಿಗ್ಗೆ ದೇವಸ್ಥಾನದ ಮುಂಭಾಗದಲ್ಲಿ ಭಕ್ತಾಧಿಗಳು ಸಾಂಪ್ರದಾಯಿಕ ಕೆಂಡಕೊAಡ ಹಾಯುವ ಮೂಲಕ ದೇವರ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನಗೊAಡಿತು. ಪೂಜಾ ಮಹೋತ್ಸವ ಅಂಗವಾಗಿ ಭಕ್ತಾಧಿಗಳಿಗೆ ದೇವಸ್ಥಾನ ಸಮಿತಿ ವತಿಯಿಂದ ಅನ್ನ ಸಂತರ್ಪಣೆ ನಡೆಸಲಾಯಿತು ಅರ್ಚಕ ಶಾಂತರಾಜ್ ನೇತೃತ್ವದಲ್ಲಿ ಅರ್ಚಕರು ಪೂಜಾ ವಿದಿ ವಿಧಾನ ನಡೆಸಿದರು. ಈ ಸಂದರ್ಭ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಸದಸ್ಯರು ಗ್ರಾಮಸ್ಥರು ಭಕ್ತಾದಿಗಳು ಪಾಲ್ಗೊಂಡಿದ್ದರು.