ವೀರಾಜಪೇಟೆ, ಏ. ೧೫: ಸಹಸ್ರಾರು ಭಾಷೆಗಳು ಜಗತ್ತಿನಲ್ಲಿದ್ದರೂ ಕನ್ನಡ ಭಾಷೆಗೆ ವಿಶೇಷವಾದ ಸ್ಥಾನಮಾನವಿದೆ. ಆದ್ದರಿಂದ ಕನ್ನಡ ಭಾಷೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಲೇಖಕಿ ಕೆ. ಜಯಲಕ್ಷಿö್ಮ ಹೇಳಿದರು.

ವೀರಾಜಪೇಟೆ ಸಮೀಪದ ಅರಮೇರಿ ಕಳಂಚೇರಿ ಮಠದ ಶ್ರೀ ಲಿಂಗರಾಜೇAದ್ರ ಭವನದಲ್ಲಿ ನಡೆದ ಹೊಂಬೆಳಕು ಕಿರಣ ೨೪೨ ಮಾಸಿಕ ತತ್ವಚಿಂತನಾಗೋಷ್ಠಿ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿ ಭಾಷಾ ಬೆಳವಣಿಗೆಯಲ್ಲಿ ಸಾಮಾಜಿಕ ಮಾಧ್ಯಮಗಳ ಪಾತ್ರ ಎಂಬ ವಿಷಯದ ಬಗ್ಗೆ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಪುಸ್ತಕ ಓದುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಭಾಷೆಯ ಬೆಳವಣಿಗೆಗೆ ಪೂರಕವಾಗಿರುವ ರೇಡಿಯೋ, ಸೃಜನಶೀಲ ಬರಹಗಳು, ಪತ್ರಿಕೆಗಳು ನಿಯತ ಕಾಲಿಕೆಗಳು ಇವುಗಳನ್ನು ಮೀರಿ ಟಿವಿ, ಸಿನಿಮಾ, ಇಂಟರ್‌ನೆಟ್, ಸಾಮಾಜಿಕ ಜಾಲತಾಣ ಇತ್ಯಾದಿಗಳಿಗೆ ಜನ ಆಕರ್ಷಿತರಾಗಿದ್ದು, ಇಂಗ್ಲಿಷ್ ಭಾಷೆಯನ್ನು ಬಳಸಿ ಮಾತನಾಡುವುದೇ ಹೆಗ್ಗಳಿಕೆ ಎಂಬ ಭ್ರಮೆ ಸೃಷ್ಟಿಯಾಗಿದೆ.ಮಾಧ್ಯಮಗಳಲ್ಲಿ ಕನ್ನಡ ಬಳಕೆ ಸರಿಯಾಗಿರಬೇಕು. ಮಾಧ್ಯಮಗಳು ಭಾಷೆಯ ಆರೋಗ್ಯ ಕಾಪಾಡುವ ವೈದ್ಯರಾಗಬೇಕು ಎಂದರು.

ಕೊಡಗು ಜಾನಪದ ಪರಿಷತ್ ಅಧ್ಯಕ್ಷ, ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ. ಅನಂತಶಯನ ಮಾತನಾಡಿ, ಪುಸ್ತಕವನ್ನು ಖರೀದಿಸಿ ಓದುವ ಅಭ್ಯಾಸವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದ ಅವರು, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಕ್ಕೆ ಅರಮೇರಿ ಮಠ ನೀಡುತ್ತಿರುವ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.

ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಹೊಂಬೆಳಕು ಕಾರ್ಯಕ್ರಮದ ಸಾನಿಧ್ಯ ವಹಿಸಿ ಕೆ.ಜಯಲಕ್ಷಿ ಅವರು ಬರೆದ ನಡೆದಷ್ಟೂ ದಾರಿ ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ಸುಮಾರು ೨೧ ವರ್ಷಗಳಿಂದಲೂ ಪ್ರತಿ ತಿಂಗಳು ಹೊಂಬೆಳಕು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಕುಶಾಲನಗರದ ಸಾಹಿತಿ ಶಿಕ್ಷಕಿ ಸುನೀತಾ ಲೋಕೇಶ್ ಮಾತನಾಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೇಶವ ಕಾಮತ್, ಮಾಜಿ ಅಧ್ಯಕ್ಷ ಲೋಕೇಶ್ ಸಾಗರ್ ಮತ್ತು ಸಮರ್ಥ ಕನ್ನಡಿಗರು ಸಂಸ್ಥೆಯ ಸಂಚಾಲಕರು ಉಪಸ್ಥಿತರಿದ್ದರು.

ಇದೇ ಸಂದರ್ಭ ತಾರಾಮಂಡಲ ಸಿರಿಗನ್ನಡ ಬಳಗ ವತಿಯಿಂದ ಕನ್ನಡ ಪ್ರತಿಭಾ ಪರೀಕ್ಷೆ ಬರೆದ ವಿಜೇತರಿಗೆ ಪ್ರಶಸ್ತಿ ಪತ್ರವನ್ನು ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ವಿತರಿಸಿದರು ಪೊನ್ನಂಪೇಟೆ ಸಿ.ಐ.ಟಿ ಕಾಲೇಜಿನ ಉಪನ್ಯಾಸಕಿ ಸುಶ್ಮಿತಾ ಅವರು ಕೆ.ಜಯಲಕ್ಷಿö್ಮÃ ಅವರು ಬರೆದ ಕೆಲವು ಲೇಖನಗಳ ಬಗ್ಗೆ ವಿವರಿಸಿದರು. ಕು. ಮಿನುಗು ಪ್ರಾರ್ಥಿಸಿದರು, ಉಪನ್ಯಾಸಕ ಕಿಗ್ಗಾಲು ಹರೀಶ್ ಸ್ವಾಗತಿಸಿ, ನಿರೂಪಿಸಿದರು.