ಮಡಿಕೇರಿ ಏ.೧೫ : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ ೨೪ನೇ ವರ್ಷದ ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆಯಲ್ಲಿ ಬಲ್ಲಚಂಡ ತಂಡ ಭರ್ಜರಿ ಮುನ್ನಡೆ ಸಾಧಿಸಿದೆ.

ಮೈದಾನ ೧ರಲ್ಲಿ ಮುಕ್ಕಾಟಿರ (ಕುಂಬಳದಾಳು) ಮತ್ತು ಕಲ್ಲುಮಾಡಂಡ (ಚೇರಂಬಾಣೆ) ತಂಡಗಳ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ೪೯ ರನ್‌ಗಳಿಂದ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಕ್ಕಾಟಿರ ೬ ಓವರ್‌ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೯೬ ರನ್ ಗಳಿಸಿತು. ಇದನ್ನು ಬೆನ್ನತ್ತಿದ ಕಲ್ಲುಮಾಡಂಡ ೬ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೪೭ ರನ್ ಮಾತ್ರ ಸೇರಿಸಿ ಸೋಲೊಪ್ಪಿಕೊಂಡಿತು.

ಚೋವಂಡ ಮತ್ತು ಮೊಣ್ಣಂಡ ನಡುವಿನ ಪಂದ್ಯದಲ್ಲಿ ಮೊಣ್ಣಂಡ ತಂಡಕ್ಕೆ ೯ ರನ್‌ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೊಣ್ಣಂಡ ೬ ಓವರ್‌ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೭೯ ರನ್ ಸೇರಿಸಿತು. ಚೋವಂಡ ೬ ಓವರ್‌ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೭೦ ರನ್ ಗಳಿಸಿ ಸೋಲು ಕಂಡಿತು.

ಅಪ್ಪುಡ ಮತ್ತು ತೀತರಮಾಡ ತಂಡಗಳ ನಡುವಿನ ಪಂದ್ಯದಲ್ಲಿ ಅಪ್ಪುಡ ೭ ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಪ್ಪುಡ ೬ ಓವರ್‌ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೭೪ ರನ್ ಗಳನ್ನು ಗಳಿಸಿತು. ತೀತರಮಾಡÀ ೬ ಓವರ್‌ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೬೭ ರನ್ ಗಳಿಸಿ ಸೋಲಿಗೆ ಶರಣಾಯಿತು.

ಬಡುವಂಡ ಮತ್ತು ಕಬ್ಬಚ್ಚಿರ ನಡುವಿನ ಪಂದ್ಯದಲ್ಲಿ ಬಡುವಂಡ ತಂಡ ೧೬ ರನ್ ಗಳಿಂದ ವಿಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಬಡುವಂಡ ೬ ಓವರ್ ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೭೪ ರನ್ ಗಳಿಸಿತು. ಕಬ್ಬಚ್ಚಿರ ೬ ಓವರ್ ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೫೮ ರನ್ ಗಳಿಸಿ ಸೋಲು ಕಂಡಿತು.

ಪೊನ್ನಿಮಾಡ ಮತ್ತು ಚೆಂಬAಡ ನಡುವಿನ ಪಂದ್ಯದಲ್ಲಿ ಪೊನ್ನಿಮಾಡ ತಂಡಕ್ಕೆ ೯ ವಿಕೆಟ್‌ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಂಬAಡ ೬ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೩೫ ರನ್ ಸೇರಿಸಿತು. ಪೊನ್ನಿಮಾಡ ೨.೧ ಓವರ್‌ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೩೯ ರನ್ ಗಳಿಸಿ ಗೆಲುವಿನ ನಗು ಬೀರಿತು.

ಚೊಟ್ಟೆಯಂಡಮಾಡ ಮತ್ತು ಮಲ್ಲಂಗಡ ತಂಡಗಳ ನಡುವಿನ ಹಣಾಹಣಿಯಲ್ಲಿ ಚೊಟ್ಟೆಯಂಡಮಾಡ ೫೦ ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೊಟ್ಟೆಯಂಡಮಾಡ ೬ ಓವರ್‌ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೯೩ ರನ್ ಗಳಿಸಿತು. ಮಲ್ಲಂಗಡ ೬ ಓವರ್‌ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೪೩ ರನ್ ಗಳನ್ನಷ್ಟೇ ಸೇರಿಸಿ ಸೋಲೊಪ್ಪಿಕೊಂಡಿತು.

ಅಯ್ಯಕುಟ್ಟಿರ ಮತ್ತು ಮುಂಡ್ಯೋಳAಡ ನಡುವಿನ ಪಂದ್ಯದಲ್ಲಿ ಮುಂಡ್ಯೋಳAಡ ತಂಡ ೪೩ ರನ್‌ಗಳ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಡ್ಯೋಳAಡ ೬ ಓವರ್ ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೯೨ ರನ್ ಸೇರಿಸಿತು. ಅಯ್ಯಕುಟ್ಟಿರ ತಂಡ ೬ ಓವರ್ ಗಳಲ್ಲಿ ೬ ವಿಕೆಟ್ ನಷ್ಟಕ್ಕೆ ೪೯ ರನ್ ಮಾತ್ರ ಗಳಿಸಿ ಸೋಲು ಕಂಡಿತು.

ಬೊವ್ವೇರಿಯAಡ ಮತ್ತು ಮುದ್ದುರ ನಡುವಿನ ಪಂದ್ಯದಲ್ಲಿ ಬೊವ್ವೇರಿಯಂಡ ತಂಡಕ್ಕೆ ೯ ವಿಕೆಟ್‌ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುದ್ದುರ ೬ ಓವರ್ ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೪೯ ರನ್ ಸೇರಿಸಿತು. ಬೊವ್ವೇರಿಯಂಡ ೬ ಓವರ್‌ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೫೦ ರನ್ ಗಳಿಸಿ ಗೆಲುವು ಸಾಧಿಸಿತು.

ಮೈದಾನ ೨ರಲ್ಲಿ ಬಲ್ಲಚಂಡ ಮತ್ತು ನಾಟೋಳಂಡ ತಂಡಗಳ ನಡುವಿನ ಪಂದ್ಯದಲ್ಲಿ ಬಲ್ಲಚಂಡ ೧೦ ವಿಕೆಟ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ನಾಟೋಳಂಡ ೬ ಓವರ್‌ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೩೦ ರನ್ ಗಳಿಸಿತು. ಬಲ್ಲಚಂಡ ೨.೪ ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ೩೧ ರನ್ ಸೇರಿಸಿ ಜಯ ಸಾಧಿಸಿತು.

ಚೀಯಣಮಾಡ ಮತ್ತು ಮುಕ್ಕಾಟಿರ(ಹರಿಹರ) ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ತಂಡಕ್ಕೆ ೯ ವಿಕೆಟ್‌ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೀಯಣಮಾಡ ೬ ಓವರ್‌ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೭೩ ರನ್ ಸೇರಿಸಿತು. ಮುಕ್ಕಾಟಿರ ೫.೪ ಓವರ್ ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೭೪ ರನ್ ಗಳಿಸಿ ಗೆಲುವು ಕಂಡಿತು.

ಬದಲೆರ ಮತ್ತು ಚಿರಿಯಪಂಡ ನಡುವಿನ ಪಂದ್ಯದಲ್ಲಿ ಚಿರಿಯಪಂಡ ತಂಡ ೮ ವಿಕೆಟ್‌ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಬದಲೆರ ೬ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೬೩ ರನ್ ಗಳಿಸಿತು. ಚಿರಿಯಪಂಡ ೪.೨ ಓವರ್‌ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೬೬ ರನ್ ಸೇರಿಸಿ ಜಯ ದಾಖಲಿಸಿತು.

ಕುಪ್ಪಣಮಾಡ ಮತ್ತು ನಂದಿರ ನಡುವಿನ ಪಂದ್ಯದಲ್ಲಿ ನಂದಿರ ೨೦ ರನ್ ಗಳಿಂದ ಗೆಲುವು ಕಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ನಂದಿರ ೬ ಓವರ್ ಗಳಲ್ಲಿ ೯ ವಿಕೆಟ್ ನಷ್ಟಕ್ಕೆ ೬೨ ರನ್ ಸೇರಿಸಿತು. ಕುಪ್ಪಣಮಾಡ ೬ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೪೨ ರನ್ ಗಳಿಸಿ ಸೋಲು ಅನುಭವಿಸಿತು.

ದಾಸಂಡ ಮತ್ತು ಕೊದೇಂಗಡ ನಡುವಿನ ಪಂದ್ಯದಲ್ಲಿ ದಾಸಂಡ ೨೫ ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಾಸಂಡ ೬ ಓವರ್‌ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೧೦೩ ರನ್ ಗಳಿಸಿತು. ಕೊದೇಂಗಡ ೬ ಓವರ್‌ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೭೮ ರನ್ ಸೇರಿಸಿ ಸೋಲು ಕಂಡಿತು. ಚೀಕಂಡ ಮತ್ತು ಪಾರುವಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಚೀಕಂಡ ೭ ವಿಕೆಟ್‌ಗಳ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಪಾರುವಂಗಡ ೬ ಓವರ್ ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೪೭ ರನ್ ಸೇರಿಸಿತು. ಚೀಕಂಡ ೩.೩ ಓವರ್ ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೪೮ ರನ್ ಗಳಿಸಿ ಗೆಲುವು ಸಾಧಿಸಿತು. ಅರಮಣಮಾಡ (ಬೇಗೂರು) ಮತ್ತು ಚೆರುವಾಳಂಡ ನಡುವಿನ ಪಂದ್ಯದಲ್ಲಿ ಅರಮಣಮಾಡ ತಂಡಕ್ಕೆ ೭ ವಿಕೆಟ್‌ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಚೆರುವಾಳಂಡ ೬ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೪೨ ರನ್ ಸೇರಿಸಿತು. ಅರಮಣಮಾಡ ೪.೪ ಓವರ್ ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೪೩ ರನ್ ಗಳಿಸಿ ಗೆಲುವಿನ ನಗು ಬೀರಿತು.