ವೀರಾಜಪೇಟೆ, ಏ. ೧೫: ವೀರಾಜಪೇಟೆಯ ಜೂನಿಯರ್ ಕಾಲೇಜ್ ಮೈದಾನದಲ್ಲಿ ಬಿಗ್ ಬ್ಯಾಶ್ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ನಡೆಯಿತು.

ಪಂದ್ಯಾಟಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಮಾತನಾಡಿ, ಆಟದಿಂದ ಕಲಿಯುವ ಜೀವನದ ಮೌಲ್ಯ ಹಾಗೂ ಸೌಹಾರ್ದ ಬದುಕಲ್ಲಿ ಎಲ್ಲರೂ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ನಾಸಿರ್, ಪಂದ್ಯಾಟದ ಆಯೋಜಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.