ಗೋಣಿಕೊಪ್ಪಲು, ಏ. ೧೫: ೨೦೨೫-೨೬ನೇ ಸಾಲಿನ ಮುಖ್ಯಮಂತ್ರಿ ಪದಕ ಪಡೆದ ಗೋಣಿಕೊಪ್ಪಲುವಿನ ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್ ಅವರನ್ನು ಪೊಲೀಸ್ ಇಲಾಖೆ, ಗೋಣಿಕೊಪ್ಪ ಚೇಂಬರ್ ಆಫ್ ಕಾಮರ್ಸ್, ಮರ್ಚೆಂಟ್ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಗೋಣಿಕೊಪ್ಪ ಸ್ಪೆöÊಸ್ರಾಕ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ವೀರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೊಲೀಸ್ ಇಲಾಖೆ ಸಾರ್ವಜನಿಕರೊಂದಿಗೆ ಜನಸ್ನೇಹಿ ಆಗಿ ಕೆಲಸ ನಿರ್ವಹಿಸುತ್ತಿದೆ. ನಾಗರಿಕರು ಇಲಾಖೆಯ ಮೇಲೆ ಅಪಾರ ವಿಶ್ವಾಸ ಹೊಂದಿದ್ದಾರೆ. ಜನರ ವಿಶ್ವಾಸಕ್ಕೆ ಧÀಕ್ಕೆ ಬಾರದ ರೀತಿಯಲ್ಲಿ ಪೊಲೀಸರು ಕೆಲಸ ನಿರ್ವಹಿಸಬೇಕು. ಗೋಣಿಕೊಪ್ಪ ಸಿಪಿಐ ಶಿವರಾಜ್ ಮುಧೋಳ್ ನಾಗರಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಕರ್ತವ್ಯದಲ್ಲಿ ನಿಷ್ಠೆ ಇರುವುದರಿಂದ ಸರಕಾರ ಪದಕ ನೀಡಿ ಗೌರವಿಸಿದೆ. ಇದರಿಂದ ಪೊಲೀಸ್ ಇಲಾಖೆಗೆ ಮತ್ತಷ್ಟು ಗೌರವ ಹೆಚ್ಚಾಗಿದೆ ಎಂದರು.
ಗೋಣಿಕೊಪ್ಪಲುವಿನ ದಿ ಮರ್ಚೆಂಟ್ ಕೋ ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷ ಕಿರಿಯಮಾಡ ಅರುಣ್ ಪೂಣಚ್ಚ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳು ಕೆಲಸ ನಿರ್ವಹಿಸುತ್ತಿರುವುದರಿಂದ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಮುಂದುವರೆಯುತ್ತಿದೆ. ಪೊಲೀಸರು ಸಕಾಲದಲ್ಲಿ ನಾಗರಿಕರಿಗೆ ಸ್ಪಂದಿಸುತ್ತಿದ್ದಾರೆ ಎಂದರು.
ಗೋಣಿಕೊಪ್ಪ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕಡೇಮಾಡ ಸುನೀಲ್ ಮಾದಪ್ಪ ಮಾತನಾಡಿದರು. ಚೇಂಬರ್ ಆಫ್ ಕಾಮರ್ಸ್ನ ಕಾಡ್ಯಮಾಡ ಗಿರೀಶ್ ಗಣಪತಿ, ಪೊನ್ನಿಮಾಡ ಸುರೇಶ್, ವೀರಾಜಪೇಟೆ ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ ಸೇರಿದಂತೆ ಇನ್ನಿತರ ಪ್ರಮುಖರು ಮಾತನಾಡಿದರು. ಕಾರ್ಯಕ್ರಮದಲ್ಲಿ ಚೇಂಬರ್ ಆಫ್ ಕಾಮರ್ಸ್ನ ಪ್ರಮುಖರಾದ ಲಕ್ಷಿö್ಮರೆಡ್ಡಿ, ಎ.ಜೆ.ಬಾಬು, ರಾಜಶೇಖರ್, ಗಣೇಶ್ ರೈ, ಅಜಿತ್ಅಯ್ಯಪ್ಪ, ಅರವಿಂದ್ ಕುಟ್ಟಪ್ಪ, ಉಮ್ಮರ್ ಸೇರಿದಂತೆ ಅನೇಕ ಪ್ರಮುಖರು ಪಾಲ್ಗೊಂಡಿದ್ದರು. ಚೇಂದAಡ ಸುಮಿ ಸುಬ್ಬಯ್ಯ ಪ್ರಾರ್ಥಿಸಿ, ಪ್ರಭಾಕರ್ ನೆಲ್ಲಿತ್ತಾಯ ಸ್ವಾಗತಿಸಿ, ವಂದಿಸಿದರು.