ಕೂಡಿಗೆ, ಏ. ೧೭: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಗ್ರಾಮದ ಸಿರಾಜಳ್ಳ ದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ನಡೆಯಿತು. ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಆರ್.ಕೆ. ಚಂದ್ರ, ಮಾವಜಿ ರಕ್ಷಿತ್ ಹಾಗೂ ಗ್ರಾಮದ ಹಿರಿಯರಾದ ಗೌರಮ್ಮ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.