ಕೋವರ್‌ಕೊಲ್ಲಿ ಇಂದ್ರೇಶ್

ಬೆAಗಳೂರು, ಏ. ೧೭: ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ(Sಣಚಿಟಿಜಡಿಚಿಜ oಠಿeಡಿಚಿಣiಟಿg ಠಿಡಿoಛಿeಜuಡಿe-SಔP)ಯನ್ನು ಶುಕ್ರವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು. ಇನ್ನು ಮುಂದೆ ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಅನುಮೋದಿತ ಚಾರಣ ಪಥಗಳಲ್ಲಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ಚಾರಣಿಗರ ಸುರಕ್ಷತೆಗಾಗಿಯೇ ರೂಪಿಸಲಾಗಿರುವ ಈ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು ಇಂದು ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿ ೧೦ ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರಿರುತ್ತಾರೆ. ಎಲ್ಲಾ ಚಾರಣ ಪಥಗಳಲ್ಲಿ ಒಂದು ಬಾರಿಗೆ ಗರಿಷ್ಠ ೧೫೦ ಜನರಿಗೆ ಮಾತ್ರ ಸೀಮಿತಗೊಳಿಸಲಾಗುವುದು ಎಂದರು. ಚಾರಣಕ್ಕೆ ಬರುವವರು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯಗೊಳಿಸಲಾಗಿದ್ದು ಒಂದೊಮ್ಮೆ ಯಾವುದೇ ದಿನ ಒಬ್ಬರೇ ಚಾರಣಿಗರು ನೋಂದಾಯಿಸಿದ್ದರೂ ಅವರಿಗೆ ಗೈಡ್ ಸೌಲಭ್ಯ ಕಲ್ಪಿಸಲಾಗುವುದು. ಗೈಡ್ ಇಲ್ಲದೆ ಯಾವುದೇ ಸ್ಥಳದಲ್ಲಿ ಚಾರಣಕ್ಕೆ ಅವಕಾಶ ಇರುವುದಿಲ್ಲ. ಇತ್ತೀಚೆಗೆ ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದಿಂದ ಚಾರಣಕ್ಕೆ ಬಂದಿದ್ದ ಮಹಿಳೆ ನಾಪತ್ತೆಯಾಗಿ ಕಾಡಿನಲ್ಲಿ ೩ ದಿನ ಕಳೆಯುವಂತಾದ ಹಾಗೂ ಅರಣ್ಯ ವ್ಯಾಪ್ತಿಗೆ ಒಳಪಡದ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿ ಶವವಾಗಿ ಬಾಲಕಿ ಪತ್ತೆಯಾದ ಹಿನ್ನೆಲೆಯಲ್ಲಿ ಚಾರಣಿಗರ ಸುರಕ್ಷತೆಗಾಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಈ ಎಸ್‌ಒಪಿ ರೂಪಿಸಲು ಸೂಚಿಸಿದ್ದಾಗಿ ಸಚಿವರು ತಿಳಿಸಿದರು. ಇನ್ನು ಮುಂದೆ ಪ್ರತಿಯೊಂದು ಚಾರಣ ಪಥದಲ್ಲೂ ಪ್ರಕೃತಿ ಮಾರ್ಗದರ್ಶಕರಿಗೆ ಜಿಪಿಎಸ್ ಅಳವಡಿಸಿದ ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ವಾಕಿಟಾಕಿಯನ್ನು ಕಡ್ಡಾಯವಾಗಿ ನೀಡಲಾಗುವುದು. ಅದೇ ರೀತಿ, ಪ್ರತಿಯೊಬ್ಬ ಚಾರಣಿಗರ ಮೊಬೈಲ್‌ಗೆ ಚಾರಣಪಥದ ನಕ್ಷೆ ಸಹಿತ ಆ್ಯಪ್‌ಅನ್ನು ಅಳವಡಿಸಲಾಗುವುದು. ಅಕಸ್ಮಾತ್ ಯಾರೇ ಚಾರಣಿಗರು ದಾರಿ ತಪ್ಪಿದರೆ ಅವರ ಶೋಧಕ್ಕೆ ಈ ಆ್ಯಪ್ ಸಹಕಾರಿಯಾಗಲಿದ್ದು ಕಾಣೆಯಾದ ಸ್ಥಳದ ಮಾಹಿತಿ ನೀಡಲಿದೆ.

ಚಾರಣ ಆರಂಭಕ್ಕೂ ಮುನ್ನ ಚಾರಣ ಆರಂಭ ಸ್ಥಳದಲ್ಲಿ (ಃಚಿse ಅಚಿmಠಿ) ಚಾರಣಿಗರಿಗೆ ಸಂಕ್ಷಿಪ್ತವಾಗಿ ಚಾರಣದ ದೂರ, ಅವಧಿ ಮತ್ತು ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲಾಗುವುದು. ಅದೇ ರೀತಿ ವನ್ಯಜೀವಿಗಳು ಎದುರಾದರೆ ಏನು ಮಾಡಬೇಕು ಎಂದು ತಿಳಿಸಲಾಗುವುದು. ಹೆಚ್ಚು ಶಬ್ದ ಮಾಡುವ ಯಾವುದೇ ರೀತಿಯ ಸಾಧನಗಳಿಗೆ, ಹರಿತವಾದ ಲೋಹದ ವಸ್ತು, ಆಯುಧಗಳನ್ನು ತೆಗೆದುಕೊಂಡು ಹೋಗಲು ಮತ್ತು ಕ್ಯಾಂಪ್ ಫೈರ್ ಮಾಡಲು ಚಾರಣ ಪಥದಲ್ಲಿ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಚಾರಣಿಗರಿಗೆ ಬೇಸ್ ಕ್ಯಾಂಪ್‌ನಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಚಾರಣ ಪಥದಲ್ಲಿ ಬೇಸ್ ಕ್ಯಾಂಪ್‌ಗೆ ಹೋಗುವ ಮಾರ್ಗಸೂಚಿ, ಬಾಣದಾಕಾರದ ಗುರುತು ಹಾಕಲಾಗುವುದು. ಮಾರ್ಗಮಧ್ಯೆ ವಿರಮಿಸಿಕೊಳ್ಳಲು ವಿಶ್ರಾಂತಿ ತಾಣ ಮಾಡಲಾಗುವುದು ಎಂದರು.

ಇನ್ನುಮುಂದೆ ಪ್ರಕೃತಿ ಮಾರ್ಗದರ್ಶಕರು (ಗೈಡ್) ಗಳು ಯಾವುದೇ ಚಾರಣಿಗ ತಮಗಿಂತ ಮುಂದೆ ಹೋಗಿಲ್ಲ ಹಾಗೂ ಹಿಂದೆ ಉಳಿದಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಬೇಸ್ ಕ್ಯಾಂಪ್, ವಿಶಾಂತಿ ತಾಣಗಳಲ್ಲಿ ಕಡ್ಡಾಯವಾಗಿ ಚಾರಣಿಗರ ಎಣಿಕೆ ಮಾಡಬೇಕು. ಪ್ರತಿ ಅರ್ಧಗಂಟೆಗೊಮ್ಮೆ ತಮ್ಮ ವಾಕಿಟಾಕಿ ಮೂಲಕ ಬೇಸ್ ಕ್ಯಾಂಪ್‌ನೊAದಿಗೆ ಸಂವಹನ ನಡೆಸಬೇಕು. ಚಾರಣಿಗರ ರಕ್ಷಣೆ ಹಾಗೂ ಸುರಕ್ಷತೆಯ ಪೂರ್ಣ ಹೊಣೆಗಾರಿಕೆ ಗೈಡ್‌ಗಳದ್ದೇ ಆಗಿರುತ್ತದೆ. ಚಾರಣ ಆರಂಭವಾದ ಒಂದು ಗಂಟೆಯೊಳಗೆ ವಾಕಿಟಾಕಿ ಸಂವಹನ ಗೈಡ್ ಕಡೆಯಿಂದ ನಡೆಯದಿದ್ದರೆ, ಬೇಸ್ ಕ್ಯಾಂಪ್ ಸಿಬ್ಬಂದಿಯೇ ಕರೆ ಮಾಡಿ ಖಚಿತಪಡಿಸಿಕೊಳ್ಳುತ್ತಾರೆ ಎಂದು ಹೇಳಿದರು.

ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ ಪತ್ರ ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ ಹಿರಿಯ ನಾಗರಿಕರು ಚಾರಣ ಕೈಗೊಳ್ಳಲು ತಮ್ಮ ದೈಹಿಕ ಸಾಮರ್ಥ್ಯ ಮತ್ತು ಸದೃಢತೆಯ ಕುರಿತು ವೈದ್ಯಕೀಯ ಪ್ರಮಾಣ ಪತ್ರ ಒದಗಿಸಬೇಕಾಗುತ್ತದೆ ಎಂದು ವಿವರಿಸಿದರು. ಯಾವುದೇ ಚಾರಣಿಗರಿಗೆ ಆರೋಗ್ಯ ಸಮಸ್ಯೆಯಾದರೆ ಅವರ ಆರೈಕೆಗಾಗಿ ಗೈಡ್ ತಮ್ಮ ಜೊತೆ ಪ್ರಥಮ ಚಿಕಿತ್ಸಾ ಕಿಟ್ ಅನ್ನು ತೆಗೆದುಕೊಂಡು ಹೋಗಬೇಕಾಗುತ್ತದೆ. ಫ್ಲಾಶ್ ಬಳಸಿ ಫೋಟೋ ತೆಗೆಯುವುದನ್ನು, ಏಕಬಳಕೆ ಪ್ಲಾಸ್ಟಿಕ್ ಹಾಗೂ ಕ್ಯಾರಿ ಬ್ಯಾಗ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಅದೇ ರೀತಿ ತ್ಯಾಜ್ಯವನ್ನು ಚಾರಣಿಗರು ತಂದು ಬೇಸ್ ಕ್ಯಾಂಪ್‌ನಲ್ಲೇ ವಿಲೇವಾರಿ ಮಾಡಬೇಕು. ಇದೆಲ್ಲವೂ ಎಸ್‌ಒಪಿಯಲ್ಲಿದೆ ಎಂದರು.

ಅರಣ್ಯ ಇಲಾಖೆ ವ್ಯಾಪ್ತಿಯ ಚಾರಣ ಪಥಗಳ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ಆಗುವಂತೆ ಎಲ್ಲ ಚಾರಣ ಪಥಗಳನ್ನೂ hಣಣಠಿs://ಚಿಡಿಚಿಟಿಥಿಚಿvihಚಿಚಿಡಿಚಿ.ಞಚಿಡಿಟಿಚಿಣಚಿಞಚಿ.gov.iಟಿ/ ಅಂತರ್ಜಾಲ ತಾಣದಲ್ಲಿ ಸೇರ್ಪಡೆ ಮಾಡುವಂತೆ ಸೂಚನೆ ನೀಡಿರುವುದಾಗಿಯೂ ಅರಣ್ಯ ಸಚಿವ ಈಶ್ವರ ಖಂಡ್ರೆ ಇದೇ ಸಂದರ್ಭ ತಿಳಿಸಿದರು.

ಈ ಸಂದರ್ಭ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್, ಎಪಿಸಿಸಿಎಫ್ ಬಿಸ್ವಜಿತ್ ಮಿಶ್ರ ಹಾಗೂ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.