ಮಡಿಕೇರಿ, ಏ. ೧೭: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಗ್ರಾಮ ಪಂಚಾಯಿತಿ ನೌಕರರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಟ ವೇತನವನ್ನು ಜಾರಿಗೊಳಿಸಬೇಕು ಮತ್ತು ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ನಂತರ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಪಿ.ಆರ್. ಭರತ್, ಉಪಾಧ್ಯಕ್ಷರುಗಳಾದ ವಿಂದ್ಯಾ, ರಂಗಸ್ವಾಮಿ, ಮಹಾದೇವ್, ಉಪಕಾರ್ಯದರ್ಶಿ ವಿಜಯ್, ಸಮಿತಿ ಸದಸ್ಯರಾದ ವೀರಭದ್ರ ಹಾಗೂ ಸತೀಶ್ ಸೇರಿದಂತೆ ನೌಕರರು ಭಾಗವಹಿಸಿದ್ದರು.