ಸಿದ್ದಾಪುರ, ಏ. ೧೭: ಕ್ರೀಡೆಯು ಮನುಷ್ಯನ ಮಾನಸಿಕ ಹಾಗೂ ದೈಹಿಕ ಬೆಳವಣೀಗೆಗೆ ಸಹಕಾರಿಯಾಗುತ್ತದೆ ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ಚೆನ್ನಯ್ಯನಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಲೆಜೆಂಡ್ಸ್ ಯುವಕ ಸಂಘದ ವತಿಯಿಂದ ಹಮ್ಮಿಕೊಂಡಿರುವ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದ ಅವರು, ಭಾರತೀಯ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಜವಾಬ್ದಾರಿ ಪ್ರತಿಯೊಬ್ಬ ಭಾರತೀಯರ ಮೇಲಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರುಗಳಾದ ವಿಜು ಸುಬ್ರಮಣಿ, ಗಣೇಶ, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಅಜ್ಜಿಕುಟ್ಟಿರ ಪೊನ್ನು, ಮಂಡೆಟೀರ ಅನಿಲ್, ಕುಂಡಚ್ಚಿರ ಮಂಜು ದೇವಯ್ಯ, ಅಪ್ರು ರವೀಂದ್ರ, ಅನಿಲ್ ಸೀನಪ್ಪ, ಚೇಕು, ರವೀಂದ್ರ ಬಾವೆ, ಶಬೀರ್ ಹಾಗೂ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಇನ್ನಿತರರು ಹಾಜರಿದ್ದರು.