ಮಡಿಕೇರಿ, ಏ. ೧೭: ಕೊಡಗು ಜಿಲ್ಲೆಯ ಸರ್ಕಾರಿ ನಿವೃತ್ತ ಮತ್ತು ಕುಟುಂಬ ಪಿಂಚಣಿದಾರರ ಕುಂದುಕೊರತೆ ನಿವಾರಣೆ ಸಂಬAಧ ತಾ. ೨೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಭಾಗಮಟ್ಟದ ಪಿಂಚಣಿ ಅದಾಲತ್ ನಡೆಯಲಿದೆ.

ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿಯ ವೀಡಿಯೋ ಸಂವಾದ ಸಭಾಂಗಣದಲ್ಲಿ ಪಿಂಚಣಿದಾರರ ಕುಂದುಕೊರತೆ ಸಂಬAಧ ಪಾಲ್ಗೊಂಡು ಮಾಹಿತಿ ಪಡೆಯಬಹುದಾಗಿದೆ. ಹಾಗೆಯೇ ಕುಂದುಕೊರತೆ ಇದ್ದಲ್ಲಿ ಹತ್ತಿರದ ತಾಲೂಕು ಖಜಾನೆ ಕಚೇರಿಗೆ ಲಿಖಿತವಾಗಿ ಮಾಹಿತಿ ನೀಡಬಹುದಾಗಿದೆ ಎಂದು ಖಜಾನೆ ಇಲಾಖೆಯ ಉಪ ನಿರ್ದೇಶಕ ಬಿ.ಎನ್. ರಘುನಾಥ್ ತಿಳಿಸಿದ್ದಾರೆ.