ಕಡಂಗ, ಏ. ೧೭ : ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕೊಮ್ಮೆತೋಡು ಗ್ರಾಮಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಅವರು ಭೇಟಿ ನೀಡಿ ಈ ಹಿಂದೆ ಸ್ಥಳೀಯ ಪ್ರಮುಖರ ಮನವಿಯಂತೆ ನಿರ್ಮಿಸಿದ ಬದ್ರಿಯಾ ಜುಮಾ ಮಸೀದಿಯ ನೂತನ ಕಚೇರಿ, ವೇದಿಕೆ ಹಾಗೂ ಖಬರ್‌ಸ್ಥಾನ ಆವರಣ ಗೋಡೆಯ ಉದ್ಘಾಟನೆಯನ್ನು ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಜಮಾಅತ್ ಅಧ್ಯಕ್ಷ ರಫೀಕ್ ಕೋಳುಮಂಡ ಮಾತನಾಡಿ, ಶಾಸಕರಿಂದ ಇನ್ನಷ್ಟು ಅಭಿವೃದ್ಧಿ ಕೆಲಸಗಳು ನಡೆಯಲಿ ಎಂದು ಆಶಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಕಾಂಗ್ರೆಸ್ ಘಟಕದ ಅಧ್ಯಕ್ಷ ಹನೀಫ್ ಮಾತನಾಡಿ, ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು. ಈ ಸಂದರ್ಭ ಜಮಾಅತ್ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಧರ್ಮಗುರುಗಳಾದ ಹಮಿದ್ ಸಖಾಫಿ, ಅಹ್ಮದ್ ಹಾಜಿ, ಹಂಸ ಹಾಜಿ, ತಾಲೂಕು ಬಗರ್ ಹುಕುಂ ಅಧ್ಯಕ್ಷ ಸಲಾಂ, ದುಡಿಯಂಡ ಸೂಫಿ ಹಾಜಿ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷ ಮತೀನ್, ಪುರಸಭೆ ಮಾಜಿ ಸದಸ್ಯ ರಾಜೇಶ್ ಪದ್ಮನಾಭ, ವೀರಾಜಪೇಟೆ ಯೂತ್ ಕಾಂಗ್ರೆಸ್‌ನ ಶಬೀರ್, ಕುಂಡಚ್ಚಿರ ಮಂಜು ದೇವಯ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ದರು.