ಸಿದ್ದಾಪುರ ತಾ. ೧೭:: ವೀರಾಜಪೇಟೆ ತಾಲೂಕು ಅರಣ್ಯ ಭವನದಲ್ಲಿ ಡಾ ಬಿ.ಆರ್ ಅಂಬೇಡ್ಕರ್ ಅವರ ೧೩೫ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಹಾಕಲಾಯಿತು. ಕಾರ್ಯಕ್ರಮದಲ್ಲಿ ದಿನದ ಮಹತ್ವದ ಬಗ್ಗೆ ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಕೆ.ವಿ ಶಿವರಾಂ ಮಾಹಿತಿ ನೀಡಿದರು. ಈ ಸಂದರ್ಭ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.