ಮಡಿಕೇರಿ, ಏ. ೧೭: ವೀರಾಜಪೇಟೆ ತಾಲೂಕಿನ ಅಮ್ಮತ್ತಿ - ಒಂಟಿಯAಗಡಿ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ತಾ. ೧೯ ರಂದು ಕಣ್ಣಂಗಾಲ ಒಕ್ಕಲಿಗರ ಸಂಘದಿAದ ಯುಗಾದಿ ಹಬ್ಬದ ಪ್ರಯುಕ್ತ ವಿವಿಧ ಕ್ರೀಡಾಕೂಟ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಾಧಕರು ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಣ್ಣಂಗಾಲ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಎಸ್ ಗೋಪಾಲಕೃಷ್ಣ (ಗೋಪಿ) ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಣ್ಣಂಗಾಲದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲಿಗ ಜನಾಂಗ ಬಾಂಧವರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಣ್ಣಂಗಾಲ ಒಕ್ಕಲಿಗರ ಸಂಘದಿAದ ಕ್ರೀಡಾಕೂಟ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.
ಕಾರ್ಯಕ್ರಮದ ಯಶಸ್ಸಿಗಾಗಿ ಒಟ್ಟು ೧೨ ಉಪ ಸಮಿತಿಗಳನ್ನು ರಚಿಸಿದ್ದು, ಉಪ ಸಮಿತಿಗಳಿಗೆ ನಿರ್ದೇಶಕರನ್ನೇ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ತಾ. ೧೯ ರಂದು ಅಮ್ಮತ್ತಿ - ಒಂಟಿಯAಗಡಿ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಎಸ್ ಗೋಪಾಲಕೃಷ್ಣ (ಗೋಪಿ) ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹೊಳೆನರಸೀಪುರ ಚೆಸ್ಕಾಂ ಅಭಿಯಂತರಾದ ಕೆ.ಕೆ. ಮೋಹನ್ ಕುಮಾರ್, ವೀರಾಜಪೇಟೆ ತಾಲೂಕು ಪಂಚಾಯಿತಿ ವ್ಯವಸ್ಥಾಪಕ ಕೆ.ಆರ್. ಸ್ವರೂಪ ಆಗಮಿಸಲಿದ್ದಾರೆ.
ಸಂಜೆ ಐದು ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ, ಸಮಾಜ ಸೇವಕ ಹರಪಳ್ಳಿ ರವೀಂದ್ರ, ಮೈಸೂರು ವಿಭಾಗದ ಪ್ರಾದೇಶಿಕ ಭೂ ದಾಖಲೆಗಳ ಜಂಟಿ ನಿರ್ದೇಶಕ ಈ. ಪ್ರಕಾಶ್ ಭಾಗವಹಿಸಲಿದ್ದಾರೆ.
ಈ ಬಾರಿಯ ಕ್ರೀಡಾಕೂಟದಲ್ಲಿ ಆಡಳಿತ ಮಂಡಳಿಯ ತೀರ್ಮಾನದಂತೆ ಕಣ್ಣಂಗಾಲ ಗ್ರಾಮದ ಕುಲಬಾಂಧವರನ್ನು ಮದುವೆಯಾಗಿರುವ ಹೆಣ್ಣು ಮಕ್ಕಳು ಮತ್ತು ಅವರ ಮಕ್ಕಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಿದ್ದೇವೆ. ಕಣ್ಣಂಗಾಲ ಒಕ್ಕಲಿಗರ ಸಂಘದ ವ್ಯಾಪ್ತಿಗೆ ಒಳಪಡುವ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿದ್ದು, ಅದೇ ರೀತಿಯಲ್ಲಿ ಈ ಹಿಂದಿನ ಆಡಳಿತ ಮಂಡಳಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ಗೋಪಾಲಕೃಷ್ಣ ಅವರು ತಿಳಿಸಿದರು.
ಕ್ರೀಡಾಕೂಟದ ಬಗ್ಗೆ ಮಾಹಿತಿ ನೀಡಿದ ಸಂಘದ ಕಾರ್ಯದರ್ಶಿ ವಿ.ವಿ. ಮಹಾಲಕ್ಷ್ಮಿ ಅವರು, ಪುರುಷರಿಗೆ ವಾಲಿಬಾಲ್, ಬಾಂಬ್ ಇನ್ ದ ಸಿಟಿ, ಮಹಿಳೆಯರಿಗೆ ಥ್ರೋಬಾಲ್, ಬಾಂಬ್ ಇನ್ ದ ಸಿಟಿ, ಬಾಲಕ ಮತ್ತು ಬಾಲಕಿಯರಿಗೆ ೪ ರಿಂದ ೬ ವರ್ಷದವರಿಗೆ ೧೦೦ ಮೀಟರ್ ಓಟ, ೭ ರಿಂದ ೧೨ ವರ್ಷದವರಿಗೆ ೧೦೦ ಮೀ ಓಟ ೧೩ ರಿಂದ ೧೮ ವರ್ಷದವರಿಗೆ ೧೦೦ ಮೀ. ಓಟ ಮತ್ತು ೧ ರಿಂದ ೩ ವರ್ಷದವರೆಗಿನ ಮಕ್ಕಳಿಗೆ ಕಾಳು ಹೆಕ್ಕುವ ಸ್ಪರ್ಧೆ ನಡೆಯಲಿದೆ ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರಾದ ವಿ.ಸಿ ಕಿರಣ್, ಕೆ.ಪಿ ಅಜಿತ್, ನಿರ್ದೇಶಕಿ ವಿ.ಎಸ್ ಸೌಮ್ಯ ಹಾಗೂ ಸಾಮಾಜಿಕ ಜಾಲತಾಣದ ಸಂಯೋಜಕಿ ವಿ.ಎಸ್. ಪಂಚಮಿ ಇದ್ದರು.