ಮಡಿಕೇರಿ,ಏ.೧೮: ಮಡಿಕೇರಿ ಅರೆಭಾಷೆ ಗೌಡ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಹತ್ತು ಕುಟುಂಬ ಹದಿನೆಂಟು ಗೋತ್ರದ ಅರೆಭಾಷೆ ಗೌಡ ಜನಾಂಗ ಬಾಂಧವರಿಗಾಗಿ ಏರ್ಪಡಿಸಲಾಗಿರುವ ಗೌಡ ಕ್ರೀಡಾ ಹಬ್ಬಕ್ಕೆ ಚಾಲನೆ ನೀಡಲಾಯಿತು.
ನಗರದ ಗಾಂಧಿ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಹಬ್ಬವನ್ನು ಕೊಡಗು ಗೌಡ ಸಮಾಜದ ಅಧ್ಯಕ್ಷ ದಂಬೆಕೋಡಿ ಆನಂದ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು; ಕ್ರಿಕೆಟ್, ಹಾಕಿಯಂತೆ ಫುಟ್ಬಾಲ್ ಕೂಡ ಉತ್ತಮ ಕ್ರೀಡೆಯಾಗಿದೆ. ಈ ಒಂದು ಕ್ರೀಡೆಯಲ್ಲಿ ಯುವ ಪೀಳಿಗೆ ತೊಡಗಿಸಿಕೊಂಡು ಮುಂದೆ ಬರಬೇಕು. ಈ ನಿಟ್ಟಿನಲ್ಲಿ ಅರೆಭಾಷೆ ಗೌಡ ಸ್ಪೋರ್ಟ್ಸ್ ಅಕಾಡೆಮಿಯ ಪ್ರಯತ್ನ ಶ್ಲಾಘನೀಯವಾದುದು. ಸರಕಾರ ಗೌಡ ಸಮಾಜಕ್ಕೆ ಜಾಗ ಮಂಜೂರು ಮಾಡಿದ್ದು ಆ ಜಾಗದಲ್ಲಿ ಅಂತರರಾಷ್ಟಿçÃಯ ಗುಣಮಟ್ಟದ ಟರ್ಫ್ ಮೈದಾನ ನಿರ್ಮಿಸಿ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲಾಗುವದೆಂದು ಹೇಳಿದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ ಮಾತನಾಡಿ; ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಕಳೆದ ವರ್ಷ ಕೂಡ ಉತ್ತಮ ರೀತಿಯಲ್ಲಿ ಕ್ರೀಡಾಕೂಟ ಏರ್ಪಡಿಸಲಾಗಿದ್ದು, ಅದನ್ನು ಮುಂದುವರಿಸಿಕೊAಡು ಬರುತ್ತಿರುವದು ಉತ್ತಮ ಕಾರ್ಯ; ಕ್ರೀಡಾಕೂಟ ಆಯೋಜನೆ ಮಾಡುವದು ಕಷ್ಟದ ಕೆಲಸ; ಜನಾಂಗ ಬಾಂಧವರು ಸಮಯ ಮೀಸಲಿರಿಸಿಕೊಂಡು ಆಯೋಜಕರಿಗೆ ಶಕ್ತಿ ನೀಡುವ ಕೆಲಸ ಮಾಡಬೇಕೆಂದು ಹೇಳಿದರು. ಸಾಮಾನ್ಯವಾಗಿ ಮಾರ್ಚ್ನಿಂದ ಮೇ ತಿಂಗಳವರೆಗೆ ಕ್ರೀಡಾಕೂಟಗಳು ನಡೆಯುತ್ತವೆ. ಸರಕಾರದ ಅನುದಾನವಿಲ್ಲದಿದ್ದರೂ ವ್ಯವಸ್ಥಿತವಾಗಿ ನಡೆಸಿಕೊಂಡು ಬರಲಾಗುತ್ತದೆ. ಎಲ್ಲರೂ ಸಂಘಟಿತರಾಗಿ ದೊಡ್ಡಮಟ್ಟದಲ್ಲಿ ಪೂರ್ವ ತಯಾರಿಯೊಂದಿಗೆ ಆಯೋಜನೆ ಮಾಡಬೇಕಿದೆ. ಕ್ರೀಡಾಕೂಟಗಳಿಂದ ಪ್ರತಿಭೆಗಳನ್ನು ಗುರುತಿಸಿ ಕ್ರೀಡಾಶಾಲೆಗಳಿಗೆ ಕಳುಹಿಸುವ ಕಾರ್ಯ ಆಗಬೇಕು. ಇದಕ್ಕೆ ಒಕ್ಕೂಟದ ವತಿಯಿಂದ ಧನ ಸಹಾಯ ಮಾಡುವದಾಗಿ ಹೇಳಿದರು. ಗೌಡ ಸ್ಪೋರ್ಟ್ಸ್ ಅಕಾಡೆಮಿ ಪದಾಧಿಕಾರಿ ಪೊನ್ನಚನ ಶ್ರೀನಿವಾಸ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಅಂತರರಾಷ್ಟಿçÃಯ ಫುಟ್ಬಾಲ್ ಆಟಗಾರರಾದ ಬೆಪ್ಪುರನ ಅಣ್ಣಪ್ಪಕುಮಾರ್, ಪದ್ಮಪ್ರಿಯ ಸಿಂಗೂರು, ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಗೌಡ ಸಮಾಜಗಳ ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ, ರಾಷ್ಟಿçÃಯ ಫುಟ್ಬಾಲ್ ಆಟಗಾರ್ತಿ ಕೋಡಿ ವಿದಿತ, ಕೊಡಗು ಗೌಡ ಯುವ ವೇದಿಕೆ ಕ್ರೀಡಾ ಸಮಿತಿ ಅಧ್ಯಕ್ಷ ಕುಟ್ಟನ ಪ್ರಶಾಂತ್, ಗೌಡ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷ ಮಂಞAಡ್ರ ವಿನೋದ್ ಇದ್ದರು. ಅಕಾಡೆಮಿ ಪದಾಧಿಕಾರಿ ಕಲ್ಲುಮುಟ್ಲು ಜಶ್ಮಿ ಕಾರ್ಯಕ್ರಮ ನಿರೂಪಿಸಿದರೆ, ಕುಡೆಕಲ್ ಸಂತೋಷ್ ವಂದಿಸಿದರು.
ಬಳಿಕ ಬಾಲಕರ, ಬಾಲಕಿಯರ, ಹಿರಿಯರ ಫುಟ್ಬಾಲ್ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿಗಳು ನಡೆದವು. ತಾ.೧೯ರಂದು(ಇAದು) ಅಂತಿಮ ಪಂದ್ಯಾಟಗಳು ಹಾಗೂ ಹಳೆಯ ಹಾಗೂ ಸೂಪರ್ ಬೈಕ್‌ಗಳ ಪ್ರದರ್ಶನ ನಡೆಯಲಿದೆ.