ಮಡಿಕೇರಿ, ಏ. ೧೯: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ‘೮ನೇ ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ ತಾ. ೨೧ ರಂದು ಮಧ್ಯಾಹ್ನ ೩ ಗಂಟೆಗೆ ಅಮ್ಮತ್ತಿ ಕೊಡವ ಸಮಾಜದಲ್ಲಿ ನಡೆಯಲಿದೆ.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಅವರು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದು, ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ ಐನಂಡ ಪ್ರಕಾಶ್ ಗಣಪತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಹಿರಿಯ ಕಲಾವಿದ, ಸಮಾಜ ಸೇವಕ ವಾಂಚಿರ ವಿಠಲ್ ನಾಣಯ್ಯ, ಇಗ್ಗುತಪ್ಪ ದೇವಸ್ಥಾನ ಅಭಿವೃದ್ಧಿ ಸಮಿತಿಯ ನಿರ್ದೇಶಕ ಪರದಂಡ ವಿಠಲ್ ಭೀಮಯ್ಯ ಹಾಗೂ ಅಮ್ಮತ್ತಿ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಚಂಬಾAಡ ರೇಷ್ಮ ಭೀಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.