ಚೆಯ್ಯಂಡಾಣೆ, ಏ. ೧೯: ನಾಪೋಕ್ಲು ಗ್ರಾಮ ಪಂಚಾಯಿ ತಿಯಲ್ಲಿ ಹಲವು ವರ್ಷಗಳಿಂದ ಪೌರಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದ ನಿವಾಸಿ ವಿಶ್ವನಾಥ್ (೩೩) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ವಿಶ್ವನಾಥ್ ಹಲವು ವರ್ಷಗಳಿಂದ ಪೌರಕಾರ್ಮಿಕರಾಗಿ ಹಾಗೂ ಟ್ರಾö್ಯಕ್ಟರ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ನಾಪೋಕ್ಲು ಮಾರುಕಟ್ಟೆ ಬಳಿಯಲ್ಲಿ ಪತ್ನಿ ಎರಡು ಮಕ್ಕಳೊಂದಿಗೆ ವಾಸವಿದ್ದ ವಿಶ್ವನಾಥ್ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಶುಕ್ರವಾರ ಮಧ್ಯರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಇವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ವಿಶ್ವನಾಥ್ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.