ಮಡಿಕೇರಿ, ಏ. ೧೯: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ೧೯ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಎರಡು ದಿನಗಳ ಕಾಲ ನಡೆಯಿತು.
ನಿನ್ನೆ ಸಂಜೆ ೬ ಗಂಟೆಗೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆ ನಡೆಯಿತು.
ಇಂದು ೭ ಗಂಟೆಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಐಕ್ಯಮತ್ಯ ಸುಕ್ರದ ಹೋಮ ಪೂಜೆ, ಕಲಶ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು.