ಮಡಿಕೇರಿ, ಏ. ೧೯: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ತಾ. ೪.೧೧.೨೦೦೨ ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊAಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಸಾಂತ್ವನ ಕೇಂದ್ರದಲ್ಲಿ ಈವರೆಗೆ ೫೭೫೫ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ೫೭೨೯ ಪ್ರಕರಣಗಳು ಇತ್ಯರ್ಥಗೊಂಡಿವೆ. ೨೦೨೫-೨೬ನೇ ಆರ್ಥಿಕ ಸಾಲಿನಲ್ಲಿ ೩೩೬ ಪ್ರಕರಣಗಳು ದಾಖಲಾಗಿ, ೩೧೩ ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ ೨೬ ಪ್ರಕರಣಗಳು ಇತ್ಯರ್ಥದ ಹಂತದಲ್ಲಿವೆ.

ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು ರೂ. ೫,೧೫,೦೦೦ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ ೨೦೨೫-೨೬ನೇ ಸಾಲಿನಲ್ಲಿ ನೀಡಲಾಗಿದೆ.

ಮಹಿಳಾ ಸಹಾಯವಾಣಿಯ ಪ್ರಯೋಜನ ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ಬಿ.ಕೆ. ರವೀಂದ್ರ ರೈ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್. ರೈ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ೯೮೮೦೯೮೫೯೩೯ (ಕಚೇರಿ) ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.