ಮಡಿಕೇರಿ, ಏ. ೧೯: ೨೦೨೫ನೇ ಸಾಲಿನ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ” ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ೨೦೨೫ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ “ಕನ್ನಡ ಪುಸ್ತಕ ಸೊಗಸು ಬಹುಮಾನ”ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪ್ರಕಾಶಕರು/ ಮುದ್ರಕರು/ ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ/ ದೂರವಾಣಿ ಸಂಖ್ಯೆ; ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ಮೇ ೧೧ ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-೫೬೦೦೦೨ - ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.
ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆಯನ್ನು ವೆಬ್‌ಸೈಟ್ hಣಣಠಿs://ಞಠಿಠಿ.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -೫೬೦೦೦೨ ಇಲ್ಲಿ ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.