ಸಿದ್ದಾಪುರ, ಏ.೨೦: ಸಮೀಪದ ಇಂಜಿಲಗೆರೆಯ ಶ್ರೀ ಪೂಮಡಪುರ ಮುತ್ತಪ್ಪ ದೇವಸ್ಥಾನದ ವಾರ್ಷಿಕ ಉತ್ಸವದ ಅಂಗವಾಗಿ ನಡೆಯುತ್ತಿರುವ ತೆರೆ ಮಹೋತ್ಸವಕ್ಕೆ ವೀರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ಭೇಟಿನೀಡಿ ದೇವರ ಆಶೀರ್ವಾದ ಪಡೆದರು. ಈ ಸಂದರ್ಭ ಮಾತನಾಡಿದ ಅವರು, ಸರ್ವ ಧರ್ಮೀಯರು ವಾಸ ಮಾಡುತ್ತಿರುವ ಪ್ರದೇಶದಲ್ಲಿ ಯಾವುದೇ ಸಂಘರ್ಷಕ್ಕೆ ಎಡೆಮಾಡದೇ ಎಲ್ಲರೂ ಒಗ್ಗಟ್ಟಾಗಿ ಉತ್ಸವಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು.