ಮಡಿಕೇರಿ, ಇ. ೨೦: ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವರದಿಯನ್ನು ಏ.೩೦ ರ ಒಳಗಾಗಿ ಪ್ರೆಸ್ ಕ್ಲಬ್ಗೆ ನೀಡುವಂತೆ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಹಿರಿಯ ಪತ್ರಕರ್ತ ಕೆ.ಬಿ. ಮಹಂತೇಶ್ ಅವರ ಸ್ಮರಣಾರ್ಥ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿ, ಕೋವರ್ ಕೊಲ್ಲಿ ಇಂದ್ರೇಶ್ ಅವರು ತಮ್ಮ ತಂದೆ ಬಿ.ವಿ ಚಂದ್ರಶೇಖರ್ ಹಾಗೂ ತಾಯಿ ಪುಷ್ಪಲತಾ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ ಹಾಗೂ ಎಂ.ಎನ್ ಚಂದ್ರಮೋಹನ್ ಅವರು ತಮ್ಮ ತಂದೆ ಎಂ.ನಾರಾಯಣ ಹಾಗೂ ತಾಯಿ ಎನ್. ಪದ್ಮಾವತಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ವರದಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಾರ್ಷಿಕ ಪ್ರಶಸ್ತಿಯು ತಲಾ ೫ ಸಾವಿರ ರೂಪಾಯಿ ನಗದು ಹಾಗೂ ಫಲಕ ಒಳಗೊಂಡಿದೆ. ಜೂ.೭ ರಂದು ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಪ್ರೆಸ್ ಕ್ಲಬ್ ಡೇ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ವಿಶೇಷ ವರದಿಗಳು ೦೧.೦೧.೨೦೨೫ ರಿಂದ ೩೧.೧೨.೨೦೨೫ ರ ಒಳಗೆ ಪ್ರಕಟವಾಗಿರಬೇಕು. ಕ್ಲಬ್ ಸದಸ್ಯರಾಗಿದ್ದು, ಒಬ್ಬರು ಒಂದು ವಿಭಾಗಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದು. ಯಾವ ವಿಭಾಗಕ್ಕೆ ಅರ್ಜಿ ಸಲ್ಲಿಸಾಗುತ್ತಿದೆ ಎಂಬ ವಿವರವನ್ನು ನಮೂದಿಸಬೇಕು. ವಿಶೇಷ ವರದಿಯ ಎರಡು ಪ್ರತಿಗಳೊಂದಿಗೆ ಕೊಡಗು ಪ್ರೆಸ್ ಕ್ಲಬ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಎಂ.ಕೆ.ಆದರ್ಶ್ ತಿಳಿಸಿದ್ದಾರೆ.