ವೀರಾಜಪೇಟೆ, ಏ. ೨೦: ಪ್ರತಿಯೊಬ್ಬರು ರಕ್ತದಾನವನ್ನು ಸಾಮಾಜಿಕ ಜವಾಬ್ದಾರಿ ಎಂದು ಅರಿತುಕೊಳ್ಳಬೇಕು ಎಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ. ಕರುಂಬಯ್ಯ ಅಭಿಪ್ರಾಯಪಟ್ಟರು. ಅವರು ವೀರಾಜಪೇಟೆ ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಎನ್‌ಎಸ್‌ಎಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ಹಾಗೂ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಜಿಲ್ಲಾಸ್ಪತ್ರೆಗಳ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಾಮಾಜಿಕ ಜವಾಬ್ದಾರಿ ಹಾಗೂ ಆರೋಗ್ಯ ಜಾಗೃತಿ ಅತೀ ಮುಖ್ಯವಾಗಿದ್ದು ವಿದ್ಯಾರ್ಥಿ ಹಂತದಿAದಲೇ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಯುವಜನರು ಪಣ ತೊಡಬೇಕು ಎಂದರು. ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಅವರು ರಕ್ತದಾನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಮದಲೈ ಮುತ್ತು ಅವರು ಮಾತನಾಡಿ, ರಕ್ತದಾನವು ಅತೀ ಶ್ರೇಷ್ಠ ದಾನವಾಗಿದ್ದು ಒಬ್ಬರ ಜೀವವನ್ನು ಉಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿಯೊಬ್ಬರು ತಮ್ಮ ಸಾಮಾಜಿಕ ಹೊಣೆ ಹಾಗೂ ಸಮಾಜದ ಕುರಿತು ಕಾಳಜಿಯನ್ನು ಹೊಂದುವುದರ ಮೂಲಕ ರಕ್ತದಾನವನ್ನು ಮಾಡಿ ಎಂದು ಹೇಳಿದರು. ನಮ್ಮ ವಿದ್ಯಾಸಂಸ್ಥೆಯಲ್ಲಿ ಪ್ರತಿವರ್ಷವೂ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿಕೊಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿ ಸಾರ್ವಜನಿಕರನ್ನು ಒಳಗೊಂಡAತೆ ರಕ್ತದಾನ ಶಿಬಿರವನ್ನು ಕಾಲೇಜಿನಲ್ಲಿ ಆಯೋಜಿಸಲಾಗುವುದು ಎಂದು ಹೇಳಿದರು. ಕಾಲೇಜಿನ ಎನ್ ಎಸ್ ಎಸ್ ಘಟಕದ ಅಧಿಕಾರಿ ಬಿ. ಎನ್. ಶಾಂತಿಭೂಷಣ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಬಿ.ಡಿ., ರೆಡ್‌ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೆಸ್, ಉಪನ್ಯಾಸಕರು, ಕಾಕೋಟುಪರಂಬು ಸರ್ಕಾರಿ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಮಡಿಕೇರಿ ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಅಧಿಕಾರಿ ವಿಲೀನ ಸ್ವಾಗತಿಸಿ, ವಿದ್ಯಾರ್ಥಿನಿ ಪ್ರಕೃತಿ ನಿರೂಪಿಸಿ, ಅಮೃತ ರಾವ್ ವಂದಿಸಿದರು.
ಸೆAಟ್ ಆ್ಯನ್ಸ್ ಪದವಿ ಕಾಲೇಜಿನ ೬೯ ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ರಕ್ತದಾನವನ್ನು ಮಾಡಿದರು. ೨೫೦ಕ್ಕೂ ಅಧಿಕ ವಿದ್ಯಾರ್ಥಿಗಳು ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆಯನ್ನು ಮಾಡಿಸಿದರು. ಈ ಸಂದರ್ಭ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯರುಗಳು, ಸಿಬ್ಬಂದಿಗಳು ಹಾಗೂ ಕಾಕೋಟುಪರಂಬು ಸರ್ಕಾರಿ ಆರೋಗ್ಯ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಗಳು, ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.