ಮಡಿಕೇರಿ, ಏ. ೨೧: ಪೋಕ್ಸೊ ಕಾಯಿದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸಂತ್ರಸ್ತ ಮಕ್ಕಳೊಂದಿಗೆ ಬೆಂಬಲ ವ್ಯಕ್ತಿಗಳಾಗಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿದವರಾಗಿಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಪದವಿ ಶಿಕ್ಷಣ ಹೊಂದಿರಬೇಕು. ಪ್ರತಿ ಪ್ರಕರಣಕ್ಕೆ ಹಂತ ಹಂತವಾಗಿ ರೂ. ೩ ಸಾವಿರ ಸಂಭಾವನೆ ನಿಗದಿಪಡಿಸಲಾಗಿದೆ. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು/ ಸಿಬ್ಬಂದಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆಯೂ ಕೂಡ ಅರ್ಜಿ ಸಲ್ಲಿಸಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯಕೈಗೊಳ್ಳಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಬೆಂಬಲ ವ್ಯಕ್ತಿಗಳಾಗಿ ಸಹಾಯ ಮಾಡಲು ತರಬೇತಿ ನೀಡಲಾಗುತ್ತದೆ.

ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಪದವಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಅಗತ್ಯವಿರುವ ದಾಖಲಾತಿಗಳೊಂದಿಗೆ ತಾ. ೩೦ ರಂದು ಸಂಜೆ ೫.೩೦ ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ, ಕೊಡಗು ಜಿಲ್ಲೆ ಈ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಅಥವಾ ಖುದ್ದಾಗಿ ಕಚೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಮಡಿಕೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೮೮೦೦ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.