ವೀರಾಜಪೇಟೆ, ಏ. ೨೧: ವಿಷು ಹಬ್ಬದ ಪ್ರಯುಕ್ತ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ಇದೇ ಮೊದಲ ಬಾರಿಗೆ ತಾ.೨೬ ರಂದು ವೀರಾಜಪೇಟೆಯ ತಾಲೂಕು ಮೈದಾನದಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ಅಧ್ಯಕ್ಷ ಪಿ.ಜಿ. ಸುಮೇಶ್ ತಿಳಿಸಿದ್ದಾರೆ.ಗ್ರಾಮೀಣ ಕ್ರೀಡಾಕೂಟದ ಅಂಗವಾಗಿ ೧೦೦ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸುವ ತಿರುವಾದಿರ ನೃತ್ಯವನ್ನು ಪ್ರಸ್ತುತಪಡಿಸಲಾಗುವುದು.