ಮಡಿಕೇರಿ ಏ.೨೧ : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ ೨೪ನೇ ವರ್ಷದ ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆಯಲ್ಲಿ ಅಜ್ಜೇಟಿರ, ಆದೇಂಗಡ ತಂಡಗಳು ಭರ್ಜರಿ ಗೆಲುವು ಸಾಧಿಸಿವೆ.
ಮೈದಾನ ೧ರಲ್ಲಿ ಕಲಿಯಂಡ ಮತ್ತು ಪುದಿಯೊಕ್ಕಡ ತಂಡಗಳ ನಡುವಿನ ಪಂದ್ಯವನ್ನು ಪುದಿಯೊಕ್ಕಡ ೪೩ ರನ್‌ಗಳಿಂದ ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪುದಿಯೊಕ್ಕಡ ೬ ಓವರ್ ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೭೯ ರನ್ ಸೇರಿಸಿತು. ಕಲಿಯಂಡ ೬ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೩೬ ರನ್ ಗಳಿಸಿ ಸೋಲೊಪ್ಪಿಕೊಂಡಿತು.
ತೆಕ್ಕಡ ಮತ್ತು ಕರಿನೆರವಂಡ ನಡುವಿನ ಪಂದ್ಯದಲ್ಲಿ ಕರಿನೆರವಂಡ ೮ ವಿಕೆಟ್ ಗಳಿಂದ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತೆಕ್ಕಡ ೬ ಓವರ್ ಗಳಲ್ಲಿ ೬ ವಿಕೆಟ್ ನಷ್ಟಕ್ಕೆ ೫೪ ರನ್ ಗಳನ್ನು ಗಳಿಸಿತು. ಕರಿನೆರವಂಡ ೪ ಓವರ್ ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೫೫ ರನ್ ಸೇರಿಸಿ ಗೆಲುವು ಸಾಧಿಸಿತು.
ನಂದಿನೆರವAಡ ಮತ್ತು ಮಂದತAಡ ನಡುವಿನ ಪಂದ್ಯದಲ್ಲಿ ನಂದಿನೆರವAಡ ೯ ವಿಕೆಟ್ ಗಳಿಂದ ಗೆಲುವು ಕಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂದತAಡ ೬ ಓವರ್ ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೩೯ ರನ್ ಸೇರಿಸಿತು. ನಂದಿನೆರವAಡ ೩ ಓವರ್‌ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೪೦ ರನ್ ಗಳಿಸಿ ಜಯ ಸಾಧಿಸಿತು.
ಕಂಬೀರAಡ ಮತ್ತು ಅಮ್ಮಾಟಂಡ ನಡುವಿನ ಹಣಾಹಣಿಯಲ್ಲಿ ಅಮ್ಮಾಟಂಡ ೫ ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಂಬೀರAಡ ೬ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೪೬ ರನ್ ಗಳಿಸಿತು. ಅಮ್ಮಾಟಂಡ ೫.೪ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೪೯ ರನ್ ಸೇರಿಸಿ ಗೆಲುವು ಕಂಡಿತು.
ನAದಿರ ಮತ್ತು ದಾಸಂಡ ನಡುವಿನ ಪಂದ್ಯದಲ್ಲಿ ದಾಸಂಡ ೨೪ ರನ್ ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಾಸಂಡ ೬ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೬೬ ರನ್ ಗಳಿಸಿತು. ನಂದಿರ ೬ ಓವರ್‌ಗಳಲ್ಲಿ ೯ ವಿಕೆಟ್ ನಷ್ಟಕ್ಕೆ ೪೨ ರನ್ ಸೇರಿಸಿ ಸೋಲೊಪ್ಪಿಕೊಂಡಿತು.
ಬೊಟ್ಟAಗಡ ಮತ್ತು ಕಾಂಡೆರ ನಡುವಿನ ಪಂದ್ಯದಲ್ಲಿ ಬೊಟ್ಟಂಗಡ ತಂಡ ೧೦ ವಿಕೆಟ್‌ಗಳಿಂದ ವಿಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕಾಂಡೆರ ೬ ಓವರ್‌ಗಳಲ್ಲಿ ೭ ವಿಕೆಟ್ ನಷ್ಟಕ್ಕೆ ೩೧ ರನ್ ಸೇರಿಸಿತು. ಬೊಟ್ಟಂಗಡ ೨.೧ ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ೩೬ ರನ್ ಗಳಿಸಿ ಗೆಲುವು ಕಂಡಿತು.
ಕಾಣತAಡ ಮತ್ತು ಬೊಳಕಾರಂಡ (ಕುಂಜಿಲಗೇರಿ) ನಡುವಿನ ಪಂದ್ಯದಲ್ಲಿ ಬೊಳಕಾರಂಡ ೨ ರನ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬೊಳಕಾರಂಡ ೬ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೫೧ ರನ್ ಗಳಿಸಿತು. ಕಾಣತಂಡ ೬ ಓವರ್‌ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೪೯ ರನ್ ಸೇರಿಸಿ ಸೋಲು ಅನುಭವಿಸಿತು.
ಮೈದಾನ ೨ರಲ್ಲಿ ಚೊಟ್ಟೆಯಂಡಮಾಡ ಮತ್ತು ಪಾಲಂದಿರ (ಬಲಂಬೇರಿ) ನಡುವಿನ ಪಂದ್ಯದಲ್ಲಿ ಚೊಟ್ಟೆಯಂಡಮಾಡ ೬ ವಿಕೆಟ್‌ಗಳ ಜಯ ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಲಂದಿರ ೬ ಓವರ್‌ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೩೭ ರನ್ ಗಳಿಸಿತು. ಚೊಟ್ಟೆಯಂಡಮಾಡ ೪.೨ ಓವರ್‌ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೪೧ ರನ್ ಸೇರಿಸಿ ಗೆಲುವು ಸಾಧಿಸಿತು.
ಮೊಣ್ಣಂಡ ಮತ್ತು ಅಳಮೇಂಗಡ ನಡುವಿನ ಪಂದ್ಯದಲ್ಲಿ ಅಳಮೇಂಗಡ ತಂಡಕ್ಕೆ ೫ ವಿಕೆಟ್‌ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೊಣ್ಣಂಡ ೬ ಓವರ್ ಗಳಲ್ಲಿ ೬ ವಿಕೆಟ್ ನಷ್ಟಕ್ಕೆ ೩೮ ರನ್ ಸೇರಿಸಿತು. ಅಳಮೇಂಗಡ ೪.೪ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೩೯ ರನ್ ಗಳಿಸಿ ಗೆಲುವು ಕಂಡಿತು.
ಮುAಡAಡ ಮತ್ತು ಅಜ್ಜಿಕುಟ್ಟಿರ ನಡುವಿನ ಪಂದ್ಯದಲ್ಲಿ ಮುಂಡAಡ ತಂಡಕ್ಕೆ ೨೬ ರನ್‌ಗಳ ಗೆಲುವು ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಡAಡ ೬ ಓವರ್ ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೬೦ ರನ್ ಗಳಿಸಿತು. ಅಜ್ಜಿಕುಟ್ಟಿರ ೬ ಓವರ್ ಗಳಲ್ಲಿ ೬ ವಿಕೆಟ್ ನಷ್ಟಕ್ಕೆ ೩೪ ರನ್‌ಗಳನ್ನಷ್ಟೇ ಸೇರಿಸಿ ಸೋಲು ಕಂಡಿತು.
ಹAಚೆಟ್ಟಿರ ಮತ್ತು ಕೈಬಿಲಿರ ನಡುವಿನ ಪಂದ್ಯದಲ್ಲಿ ಹಂಚೆಟ್ಟಿರ ತಂಡಕ್ಕೆ ೨೩ ರನ್‌ಗಳ ಜಯ ದೊರೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹಂಚೆಟ್ಟಿರ ೬ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೫೫ ರನ್‌ಗಳನ್ನು ಸೇರಿಸಿತು. ಕೈಬಿಲಿರ ೬ ಓವರ್ ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೩೨ ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಚಾಮೆರ ಮತ್ತು ಅಜ್ಜೇಟಿರ ನಡುವಿನ ಪಂದ್ಯದಲ್ಲಿ ಅಜ್ಜೇಟಿರ ೪೭ ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಜ್ಜೇಟಿರ ೬ ಓವರ್‌ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೧೨೭ ರನ್ ಗಳನ್ನು ಗಳಿಸಿತು. ಚಾಮೆರ ೬ ಓವರ್‌ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೮೦ ರನ್ ಸೇರಿಸಿ ಸೋಲು ಕಂಡಿತು.
ಮಹಿಳಾ ಕ್ರಿಕೆಟ್
ಮೇರಿಯಂಡ ಮತ್ತು ಕಲಿಯಂಡ ನಡುವಿನ ಪಂದ್ಯದಲ್ಲಿ ಕಲಿಯಂಡ ತಂಡಕ್ಕೆ ೨೫ ರನ್‌ಗಳ ಜಯ ಲಭಿಸಿತು. ಕಲಿಯಂಡ ೫ ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ೫೯ ರನ್ ಗಳಿಸಿತು. ಮೇರಿಯಂಡ ೫ ಓವರ್‌ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೩೪ ರನ್ ಸೇರಿಸಿ ಸೋಲೊಪ್ಪಿಕೊಂಡಿತು.
ಮೂಕಳೆರ ಮತ್ತು ಮುಕ್ಕಾಟಿರ (ಪುಲಿಕೋಟ್) ನಡುವಿನ ಹಣಾಹಣಿಯಲ್ಲ್ಲಿ ಮೂಕಳೆರ ೯ ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಮುಕ್ಕಾಟಿರ ೫ ಓವರ್‌ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೨೫ ರನ್ ಸೇರಿಸಿತು. ಮೂಕಳೆರ ೩.೪ ಓವರ್‌ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೨೬ ರನ್ ಗಳಿಸಿ ಗೆಲುವು ಕಂಡಿತು.
ತಾಚಮಂಡ ಮತ್ತು ಕಾಣತಂಡ ನಡುವಿನ ಪಂದ್ಯದಲ್ಲಿ ಕಾಣತಂಡ ತಂಡಕ್ಕೆ ೧೩ ರನ್ ಗಳ ಜಯ ಲಭಿಸಿತು. ಕಾಣತಂಡ ೫ ಓವರ್‌ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೬೧ ರನ್‌ಗಳನ್ನು ಗಳಿಸಿತು. ತಾಚಮಂಡ ೫ ಓವರ್‌ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೪೯ ರನ್ ಗಳನ್ನು ಸೇರಿಸಿ ಸೋಲು ಕಂಡಿತು.
ಕಡೆಮಾಡ ಮತ್ತು ಆದೇಂಗಡ ನಡುವಿನ ಪಂದ್ಯದಲ್ಲಿ ಆದೇಂಗಡ ೧೦ ವಿಕೆಟ್ ಗಳಿಂದ ಗೆಲುವು ಸಾಧಿಸಿತು. ಕಡೆಮಾಡ ೫ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೩೯ ರನ್ ಸೇರಿಸಿತು. ಆದೇಂಗಡ ೫ ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಲ್ಲದೆ ೪೦ ರನ್ ಗಳಿಸಿ ಜಯ ಕಂಡಿತು.
ನಡಿಕೇರಿಯAಡ ಮತ್ತು ಮಣವಟ್ಟಿರ ನಡುವಿನ ಪಂದ್ಯದಲ್ಲಿ ಮಣವಟ್ಟಿರ ತಂಡಕ್ಕೆ ೯ ವಿಕೆಟ್‌ಗಳ ಜಯ ಲಭಿಸಿತು. ನಡಿಕೇರಿಯಂಡ ೫ ಓವರ್‌ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೩೨ ರನ್ ಗಳಿಸಿತು. ಮಣವಟ್ಟಿರ ೩.೨ ಓವರ್‌ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೩೩ ರನ್ ಸೇರಿಸಿ ಗೆಲುವು ದಾಖಲಿಸಿತು.