ಕೂಡಿಗೆ, ಏ. ೨೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿರುವ ಕ್ರಿಕೆಟ್ ಆಟದ ಮೈದಾನದಲ್ಲಿ ಕುಶಾಲನಗರ ವಲಯ ಅರಣ್ಯ ಇಲಾಖೆಯ ವತಿಯಿಂದ ಸಾರ್ವಜನಿಕ ಯುವಕರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಒಳಗೊಂಡAತೆ ತಂಡಗಳ ರಚನೆ ಮೂಲಕ ಎರಡು ದಿನಗಳ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ನೆರವೇರಿಸಿ ಮಾತನಾಡಿ ಗ್ರಾಮಾಂತರ ಪ್ರದೇಶದ ಯುವಕರು ಹಾಗೂ ಅರಣ್ಯ ಇಲಾಖೆ ಯ ಸಿಬ್ಬಂದಿ ನಡುವೆ ಸ್ನೇಹ ಸಂಬAಧ ಬೆಳೆಯಲು ಇಂತಹ ಕ್ರೀಡಾಕೂಟಗಳು ಸಹಕಾರಿ ಎಂದರು. ಮಾಜಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾತನಾಡಿ ಯುವಕÀರು ಜೀವನದ ಮೌಲ್ಯಗಳನ್ನು ಅರಿತುಕೊಳ್ಳಬೇಕೆಂದರು.

ಈ ಸಂದರ್ಭ ಮಾಜಿ ಸೈನಿಕ ವಾಂಚಿರ ಮನು ನಂಜುAಡ, ಡಿ.ಸಿ.ಎಫ್.ವಿ. ಅಭಿಷೇಕ್, ಎ.ಸಿ.ಎಫ್. ಎ.ಎ. ಗೋಪಾಲ, ಮಂಜುನಾಥ, ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್, ಸೇರಿದಂತೆ ಗಸ್ತು ಅರಣ್ಯ ಪಾಲಕರಾದ ಕೆ.ಆರ್. ಚೇತನ್, ಚಿಕ್ಕತ್ತೂರು ಯುವಕ ಸಂಘದ ಅಧ್ಯಕ್ಷ ಸಿ.ಸಿ. ಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕ ಚೇತನ್, ದೊಡ್ಡತ್ತೂರು ಯೋಗೇಶ್, ಉಪ ವಲಯ ಅರಣ್ಯಾಧಿಕಾರಿಗಳಾದ ಉಮೇಶ್, ವೆಂಕಟೇಶ್, ಗಸ್ತು ಅರಣ್ಯ ಪಾಲಕರಾದ ಮಲ್ಲನಗೌಡ ಪಾಟೀಲ್, ಸಂಪತ್ ಕುಮಾರ್, ಅರುಣ್, ಸುನಿಲ್, ಕುಡಲಪ್ಪ ಸೇರಿದಂತೆ ಇಲಾಖೆಯ ಸಿಬ್ಬಂದಿ ಸ್ಥಳೀಯ ಯುವಕರು, ಮತ್ತು ಗ್ರಾಮಸ್ಥರು ಹಾಜರಿದ್ದರು.