ವೀರಾಜಪೇಟೆ, ಏ. ೨೨: ಸರಕಾರದ ವತಿಯಿಂದ ತಾನು ಮಡಿಕೇರಿಯಲ್ಲಿ ಬಿಲ್ಲವ ಸಮಾಜಕ್ಕೆ ಜಮೀನನ್ನು ಒದಗಿಸಿಕೊಟ್ಟ ಬಗ್ಗೆ ಸ್ಮರಿಸಿದ ವೀರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಬಿಲ್ಲವ ಸಮಾಜಕ್ಕೆ ಮತ್ತಷ್ಟು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಬಿಲ್ಲವ ಸೇವಾ ಸಂಘದ ವಾರ್ಷಿಕೋತ್ಸವದ ಅಂಗವಾಗಿ ವೀರಾಜಪೇಟೆಯ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಲ್ಲವ ಸಮಾಜದವರು ಒಗ್ಗಟ್ಟಾಗಿ ಮುನ್ನಡೆಯಬೇಕೆಂದರು.
ವೇದಿಕೆಯಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎಂ. ಗಣೇಶ್, ಸಂಘದ ಪದಾಧಿಕಾರಿಗಳು, ಸದಸ್ಯರು, ಪ್ರಮುಖರು ಉಪಸ್ಥಿತರಿದ್ದರು.