ಮಡಿಕೇರಿ ಏ. ೨೨: ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಸಂಬೋದಿಸಿರುವ ರಾಷ್ಟಿçÃಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೀಳುಮಟ್ಟದ ರಾಜಕೀಯ ನಡೆ ಖಂಡನೀಯವೆAದು ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ತಮಿಳುನಾಡು ಚುನಾವಣಾ ಪ್ರಚಾರದ ಸಂದರ್ಭ ಮಲ್ಲಿಕಾರ್ಜುನ ಖರ್ಗೆ ಅವರು ಕೀಳು ಮಟ್ಟದ ಭಾಷೆ ಬಳಸಿದ್ದಾರೆ. ದೇಶದ ಜನ ಮಾತ್ರವಲ್ಲದೆ ಇಡೀ ವಿಶ್ವವೇ ಮೆಚ್ಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಲಘುವಾಗಿ ಮಾತನಾಡುವ ಮೂಲಕ ಖರ್ಗೆ ಅವರು ತಮ್ಮ ಸಣ್ಣತನವನ್ನು ಪ್ರದರ್ಶಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಸುಮಾರು ೫೦ ವರ್ಷಗಳ ರಾಜಕೀಯ ಹಿರಿತನವನ್ನು ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆಯ ಕುರಿತು ಪ್ರಧಾನಮಂತ್ರಿಗಳು ಇತ್ತೀಚೆಗಷ್ಟೇ ಅಧಿವೇಶನದಲ್ಲಿ ಗೌರವದಿಂದ ಮಾತನಾಡಿದ್ದರು. ಆದರೆ ಖರ್ಗೆ ಅವರು ಕೇವಲ ರಾಜಕೀಯ ಲಾಭಕ್ಕಾಗಿ ಮೋದಿ ಅವರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದಾರೆ. ಇದು ಸರ್ವ ಭಾರತೀಯರಿಗೆ ತೋರಿರುವ ಅಗೌರವವಾಗಿದೆ, ಖರ್ಗೆ ಅವರು ತಕ್ಷಣ ದೇಶದ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.