ಮಡಿಕೇರಿ, ಏ. ೨೨: ಕುಟ್ಟ ಗ್ರಾಮದ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬAಧ ಸಮಗ್ರ ತನಿಖೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಸೂಚನೆ ನೀಡಿದರು.

ಈ ಕುರಿತು ಶೀಘ್ರವೇ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ ಸಚಿವರು, ಪ್ರಕರಣದ ವಿವರಗಳನ್ನು ಪಡೆದುಕೊಂಡರು.

ಕೊಡಗು ಜಿಲ್ಲೆಯು ಪ್ರವಾಸೋದ್ಯಮ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿದೆ. ಇಂತಹ ಅಹಿತಕರ ಘಟನೆಗಳಿಂದ ಜಿಲ್ಲೆಯ ಘನತೆ ಹಾಗೂ ಪ್ರವಾಸೋದ್ಯಮದ ಮೇಲೆ ಗಂಭೀರವಾದ ನಕಾರಾತ್ಮಕ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.