ಮಡಿಕೇರಿ, ಏ. ೨೨: ಕುಟ್ಟ ಗ್ರಾಮದ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್, ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಕೊಡಗು ಪೊಲೀಸರು ಈರ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾನೂನು ಪ್ರಕಾರವೇ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ. ವಿದೇಶಿ ಪ್ರವಾಸಿಗರು ಅತಿಥಿಗಳಾಗಿ ಕರ್ನಾಟಕಕ್ಕೆ ಬಂದ ಸಂದರ್ಭ ಈ ರೀತಿ ಘಟನೆ ನಡೆದಿರುವುದು ವಿಷಾದನೀಯ. ಈ ಪ್ರಕರಣದಿಂದ ಸಮಾಜ, ಕರ್ನಾಟಕ ಮತ್ತು ಭಾರತದ ಬಗ್ಗೆ ವಿದೇಶದಲ್ಲಿ ಯಾವ ರೀತಿಯ ಭಾವನೆ ಉಂಟಾದೀತು? ಎಂದು ಬೇಸರ ವ್ಯಕ್ತಪಡಿಸಿದರು. ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಬದ್ಧರಾಗಿದ್ದೇವೆ. ಘಟನೆಯನ್ನು ಮುಚ್ಚಿಹಾಕಲು ಪ್ರಯತ್ನಗಳು ನಡೆದ ಬಗ್ಗೆ ಮಾಹಿತಿಗಳಿವೆ. ಆದರೆ ಪೊಲೀಸರು ಉತ್ತಮವಾಗಿ ಕಾರ್ಯನಿರ್ವಹಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಹೋಂಸ್ಟೇಗಳನ್ನು ನಿರ್ವಹಿಸುತ್ತಿರುವವರು ಸರಿಯಾದ ರೀತಿಯಲ್ಲಿ ಅನುಮತಿ ಹೊಂದಿರಬೇಕಾಗಿದೆ. ಅನುಮತಿಯಿಲ್ಲದೇ ಹೋಂಸ್ಟೇಗಳನ್ನು ನಡೆಸುತ್ತಿರುವವರ ವಿರುದ್ದ ಕಾನೂನು ಕ್ರಮಕ್ಕೆ ಸೂಚಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.