ಮಡಿಕೇರಿ, ಏ. ೨೨: ಶಂಕರಾಚಾರ್ಯರು ಸಮಾಜಕ್ಕೆ ನೀಡಿರುವ ಸಂದೇಶಗಳು ಮತ್ತು ತತ್ವಗಳನ್ನು ತಿಳಿದುಕೊಳ್ಳಬೇಕು. ಸಮಾಜ ನಿಂತಿರುವುದೇ ನಂಬಿಕೆ ಮತ್ತು ವಿಶ್ವಾಸದ ಮೇಲೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಬಿ.ಜಿ.ಅನಂತÀಶಯನ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಆದಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಂಕರಾಚಾರ್ಯ ಅವರು, ಕೇವಲ ೩೨ ವರ್ಷಗಳ ಅಲ್ಪಾಯುಷ್ಯದಲ್ಲಿ ವೇದ ಉಪ ನಿಷತ್ತುಗಳಿಗೆ ಭಾಷ್ಯ ಬರೆದು ರಾಷ್ಟçದಾದ್ಯಂತ ಸಂಚರಿಸಿ ಅದ್ವೆöÊತ ತತ್ವವನ್ನು ಪ್ರಚಾರ ಮಾಡಿದ್ದಾರೆ. ಶಂಕರಾಚಾರ್ಯರು ೮ನೇ ವಯಸ್ಸಿನಲ್ಲಿಯೇ ವೇದಗಳನ್ನು ಅಧ್ಯಯನ ಮಾಡಿ ಅಸಾಧಾರಣ ಪ್ರತಿಭೆಯನ್ನು ಹೊಂದಿದ್ದರು. ೮ನೇ ವಯಸ್ಸಿನಲ್ಲಿಯೇ ಸನ್ಯಾಸ ದೀಕ್ಷೆ ಪಡೆದು ಗೋವಿಂದ ಭಗವತ್ಪಾದರ ಬಳಿ ಶಿಷ್ಯರಾಗಿ ಬೆಳೆದರು. ಭಗವತ್ ಗೀತೆ, ಉಪನಿಷತ್ತು ಮತ್ತು ಬ್ರಹ್ಮಸೂತ್ರಗಳಿಗೆ ಭಾಷ್ಯವನ್ನು ಶಂಕರಾಚಾರ್ಯರು ಬರೆದಿದ್ದಾರೆ. ವಿವೇಕಚೂಡಾಮಣಿ, ಭಜಗೋವಿಂದA, ಸೌಂದರ್ಯ ಲಹರಿ ಮತ್ತು ಆತ್ಮಬೋಧ ಮತ್ತಿತರ ಕೃತಿಗಳನ್ನು ಶಂಕರಾಚಾರ್ಯರು ರಚಿಸಿದ್ದಾರೆ ಎಂದರು.
ಚಿಂತಕರಾದ ಸೋಮನಾಥನಂದಪುರಿ ಅವರು ಮಾತನಾಡಿ, ಶ್ರೀ ಶಂಕರಾಚಾರ್ಯರು ಸಂತ ಪರಂಪರೆಯ ಮೌಲ್ಯಗಳನ್ನು ಪುನರುತ್ಥಾನಗೊಳಿಸುವಲ್ಲಿ ಮತ್ತು ಅದ್ವೆöÊತ ವೇದಾಂತದ ಮೂಲಕ ಸನಾತನ ಧರ್ಮದ ಮಹತ್ವ ಸಾರುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಕೊಡುಗೆಗಳು ಭಾರತದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಇತಿಹಾಸದಲ್ಲಿ ಧ್ರುವನಕ್ಷತ್ರದಂತೆ ಎಂದು ವರ್ಣಿಸಿದರು.
ಕಾರ್ಯಕ್ರಮದಲ್ಲಿ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕಾರ್ಯದರ್ಶಿ ಬಿ.ಕೆ.ಜಗದೀಶ್, ಎಸ್.ಎಸ್.ಸಂಪತ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ವ್ಯವಸ್ಥಾಪಕರಾದ ಆಶಾ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಸುನೀತ ಇತರರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಸ್ವಾಗತಿಸಿದರು. ವಿದ್ವಾನ್ ಬಿ.ಸಿ.ಶಂಕರಯ್ಯ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ವಂದಿಸಿದರು.