ಸೋಮವಾರಪೇಟೆ, ಏ. ೨೩: ಮಹಿಳೆಯರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಸೂಕ್ತ ಸಮಯದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ತನ್ಮಯಿ ಪ್ರವೀಣ್ ಹೇಳಿದರು.
ಪಟ್ಟಣದ ಮಹಿಳಾ ಸಮಾಜ ಭವನದಲ್ಲಿ ನಡೆದ ಆರೋಗ್ಯ ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗರ್ಭಕಂಠ ಕ್ಯಾನ್ಸರ್ ಕುರಿತು ಸಮಾಜದಲ್ಲಿ ಇನ್ನೂ ಸಾಕಷ್ಟು ಅರಿವು ಕೊರತೆಯಿದೆ. ಆರಂಭಿಕ ಹಂತದಲ್ಲೇ ತಡೆಗಟ್ಟಬಹುದಾದ ರೋಗವಾಗಿರುವುದರಿಂದ ಲಸಿಕೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು. ಈಗ ಸರ್ಕಾರವೇ ಈ ಲಸಿಕೆಯನ್ನು ಉಚಿತವಾಗಿ ನೀಡುತ್ತಿರುವುದರಿಂದ ಸಾಮಾನ್ಯ ಜನರು ಸಹ ಸುಲಭವಾಗಿ ಇದರ ಪ್ರಯೋಜನ ಪಡೆಯಬಹುದು ಎಂದು ಅವರು ತಿಳಿಸಿದರು.
ಸ್ತಿçÃÃರೋಗ ತಜ್ಞೆ ಡಾ. ಇಮಾನಿ ಅವರು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಆರಂಭಿಕ ಹಂತದಲ್ಲಿ ಯಾವುದೇ ಸ್ಪಷ್ಟ ಲಕ್ಷಣಗಳು ಕಾಣಿಸಿಕೊಳ್ಳದ ಕಾರಣ, ನಿಯಮಿತ ಆರೋಗ್ಯ ತಪಾಸಣೆ ಮತ್ತು ರೋಗಪತ್ತೆ ಪರೀಕ್ಷೆಗಳು ಅತ್ಯಂತ ಅಗತ್ಯವಾಗಿವೆ ಎಂದು ಅವರು ತಿಳಿಸಿದರು. ೧೩ರಿಂದ ೧೫ ವರ್ಷದೊಳಗಿನ ಪ್ರತಿಯೊಂದು ಹೆಣ್ಣುಮಕ್ಕಳೂ ಗರ್ಭಕಂಠ ಕ್ಯಾನ್ಸರ್ ವಿರುದ್ಧದ ಲಸಿಕೆಯನ್ನು ಪಡೆಯಬಹುದು ಎಂದು ಹೇಳಿದರು.
ಡಾ.ವರ್ಷ ಅವರು ತ್ವಚೆ ಮತ್ತು ಕೂದಲಿನ ಆರೈಕೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕ್ಲಬ್‌ನ ಕಾರ್ಯದರ್ಶಿ ಸುವಿನಾ ಕೃಪಾಲ್, ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ವಿಜಯಲಕ್ಷಿö್ಮ ಸುರೇಶ್, ರೋಟರಿ ಅಧ್ಯಕ್ಷೆ ವೀಣಾ ಮನೋಹರ್, ಜೆಸಿಐ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ಇನ್ನರ್ ವೀಲ್ ಮಾಜಿ ಅಧ್ಯಕ್ಷೆ ಕವಿತಾ ವಿರೂಪಾಕ್ಷ ಇದ್ದರು.