ಮಡಿಕೇರಿ ಏ. ೨೩: ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೯ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನವು ತಾ. ೨೩ ರಿಂದ ಮೇ, ೨೨ ರವರೆಗೆ ನಡೆಯಲಿದ್ದು, ಯಾವುದೇ ಜಾನುವಾರು ಲಸಿಕೆಯಿಂದ ಬಿಟ್ಟು ಹೋಗದಂತೆ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸಂಬAಧ ಮಂಗಳವಾರ ಭಿತ್ತಿಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು. ಇದೊಂದು ರಾಷ್ಟಿçÃಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ, ಸುರಕ್ಷತೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಯಶಸ್ಸುಗೊಳ್ಳಬೇಕು ಎಂದರು.

ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಮಾತನಾಡಿ ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ಲಸಿಕೆ ಹಾಕಿಸುವುದರಿಂದ ಮಾತ್ರ ರೋಗ ನಿಯಂತ್ರಿಸಲು ಸಾಧ್ಯವಾಗಲಿದೆ ಕಾಲುಬಾಯಿ ರೋಗವು ಹಸು, ಎತ್ತು, ಹೋರಿ, ಎಮ್ಮೆಗೆ ತಗುಲುವ ಮಾರಕ ರೋಗವಾಗಿದ್ದು, ರೈತರಿಗೆ ಆರ್ಥಿಕ ನಷ್ಟ ಉಂಟು ಮಾಡಲಿದೆ. ಆದ್ದರಿಂದ ಜಾನುವಾರುಗಳ ರಕ್ಷಣೆ, ಸುರಕ್ಷತೆ ಬಗ್ಗೆ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಕರುಗಳಿಗೆ ತಪ್ಪದೆ ಒಮ್ಮೆ ಲಸಿಕೆ ಹಾಕಿಸಿದ ನಂತರ ಮತ್ತೊಮ್ಮೆ ೩ ರಿಂದ ೫ ವಾರದೊಳಗೆ ದನ ಹಾಗೂ ಎಮ್ಮೆಗಳಿಗೆ ಬೂಸ್ಟರ್ ಲಸಿಕೆ ಹಾಕಿಸಬೇಕು.

ಗರ್ಭಧರಿಸಿದ ಹಸು ಹಾಗೂ ಎಮ್ಮೆಗಳಿಗೂ ತಪ್ಪದೇ ಲಸಿಕೆ ಹಾಕಿಸಬೇಕು. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದರೂ ಸಹ ಪ್ರತೀ ಆರು ತಿಂಗಳಿಗೊಮ್ಮೆ ಕೈಗೊಳ್ಳುವ ಲಸಿಕೆ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಲಸಿಕೆ ಹಾಕಿಸುವುದು ಅತೀ ಮುಖ್ಯ ವಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಪ್ರಸ್ತುತ ೯ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಸಂದರ್ಭದಲ್ಲಿ ದನ ಹಾಗೂ ಎಮ್ಮೆಗಳಿಗೆ ಲಸಿಕೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ೫೨,೯೮೫ ದನ ಹಾಗೂ ೨,೧೩೬ ಎಮ್ಮೆಗಳಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಲಿಂಗರಾಜ ದೊಡ್ಡಮನಿ ಹೇಳಿದರು.

ಜಿಲ್ಲೆಯ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ ನಾಲ್ಕನೇಯ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಡೆಸಿದರು. ಈ ಕುರಿತು ಮಾಹಿತಿ ನೀಡಿದ ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಜಿಲ್ಲೆಯಲ್ಲಿ ೫ ಸಂಚಾರಿ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಜಾನುವಾರುಗಳಿಗೆ ರೈತರ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಪಾಲಿ ಕ್ಲೀನಿಕ್‌ನ ಉಪ ನಿರ್ದೇಶಕರಾದ ಡಾ.ತಿಮ್ಮಯ್ಯ, ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಪ್ರಸನ್ನ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರಾಜಶೇಖರ್(ಸೋಮವಾರಪೇಟೆ), ಡಾ.ಲತಾ ಪ್ರಸನ್ನ (ಮಡಿಕೇರಿ), ಡಾ.ನವೀನ್ (ವೀರಾಜಪೇಟೆ), ಡಾ.ಶಿಂಧೆ (ಕುಶಾಲನಗರ), ಡಾ.ಚಂದ್ರಶೇಖರ್ (ಪೊನ್ನಂಪೇಟೆ), ಡಾ.ವಿವೇಕ್ (ಜಿಲ್ಲಾ ಪ್ರತಿನಿಧಿ ಸಂಚಾರಿ ಪಶು ಚಿಕಿತ್ಸಾ ಘಟಕ) ಇತರರು ಇದ್ದರು.