ಕೂಡಿಗೆ. ಏ, ೨೩: ಶ್ರೀ ದಂಡಿನಮ್ಮ, ಶ್ರೀ ಬಸವೇಶ್ವರ, ಶ್ರೀ ಮುತ್ತತ್ ರಾಯ ದೇವಸ್ಥಾನ ಹಾಗೂ ಗ್ರಾಮ ದೇವಾ ಸಮಿತಿ ವತಿಯಿಂದ ಗ್ರಾಮ ದೇವತೆಯ ಹಬ್ಬ ಮತ್ತು ಜಾತ್ರೋತ್ಸವದ ಮೊದಲ ಭಾಗವಾಗಿ ಶ್ರೀ ಬಸವೇಶ್ವರ ದೇವರ ವಾನ್ಯ ಮೆರವಣಿಗೆ ನೆರವೇರಿತು. ಇದರ ಅಂಗವಾಗಿ ಶ್ರೀ ಬಸವೇಶ್ವರ ದೇವರ ವಿಗ್ರಹಗಳಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ವಿದ್ಯುತ್ ಅಲಂಕೃತ ಮಂಟಪದಲ್ಲಿ ಶ್ರೀ ಬಸವೇಶ್ವರ ವಿಗ್ರಹಗಳನ್ನು ಕುಳ್ಳಿರಿಸಿ ಪೂಜೆ ಸಲ್ಲಿಸಿ ಗ್ರಾಮ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಮಂಟಪ ಮುಂಭಾಗದಲ್ಲಿ ಮಂಗಳ ವಾದ್ಯ, ನಾಡ ವಾದ್ಯಗಳ ನಡುವೆ ಅತ್ಯಾಕರ್ಷಕ ಮದ್ದುಗುಂಡುಗಳ ಪ್ರದರ್ಶನ ನಡೆಯಿತು, ಈ ಸಂದರ್ಭ ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ಎಸ್. ಚಂದ್ರು, ಉಪಾಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಕೆ.ಟಿ. ವೆಂಕಟೇಶ್, ಸೇರಿದಂತೆ ಸಮಿತಿ ನಿರ್ದೇಶಕರು, ಸದಸ್ಯರು ಮೂರು ಗ್ರಾಮಗಳ ನೂರಾರು ಗ್ರಾಮಸ್ಥರು ಹಾಜರಿದ್ದರು.