ಮಡಿಕೇರಿ, ಏ. ೨೩: ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ಅನ್ಯಕೋಮಿನವರು ಕಾರ್ಪೋರೇಟ್-ಲವ್ ಜಿಹಾದ್ ನಡೆಸಿ ಮತಾಂತರಗೊಳಿಸುವ ದುಷ್ಕೃತ್ಯ ನಡೆಯುತ್ತಿದೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ನಗರದ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಯಿತು.
ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು ಇಂತಹ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಕಟು ನಿಯಮ ಕೈಗೊಳ್ಳಬೇಕು. ಪೊಲೀಸರು ಕೂಡ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಸಂತೋಷ್, ನಾಸಿಕ್ನ ಕಾರ್ಪೋರೇಟ್ ಸಂಸ್ಥೆಯಲ್ಲಿ ಇತ್ತೀಚಿಗೆ ನಡೆದ ಘಟನೆಯಿಂದ ಕಾರ್ಪೋರೇಟ್ ಜಿಹಾದ್ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಇದೇ ರೀತಿ ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ಅವರನ್ನು ಪ್ರೀತಿ-ಪ್ರೇಮ, ಸ್ನೇಹದ ಹೆಸರಿನಲ್ಲಿ ಸೆಳೆದು ಮತಾಂತರಗೊಳಿಸಿ ಬಳಿಕ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲಾಗುತ್ತಿದೆ. ಕೊಡಗಿನ ಯುವತಿಯೂ ಇದಕ್ಕೆ ಬಲಿಯಾಗಿರುವ ನಿದರ್ಶನವೂ ಇದೆ. ಲವ್ ಜಿಹಾದ್ ಕೂಡ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಸರಕಾರ ಇದಕ್ಕೆ ಕಡಿವಾಣ ಹಾಕಬೇಕು. ಇಂತಹ ತಪ್ಪಿಗೆ ಕನಿಷ್ಟ ೧೦ ವರ್ಷ ಜೈಲು, ತಪ್ಪಿತಸ್ಥರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿದರು. ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಭಜರಂಗದಳದ ಜಿಲ್ಲಾ ಸಂಯೋಜಕ ವಿನಯ್ ಮಾತನಾಡಿ, ಅನ್ಯಕೋಮಿನವರು ನಡೆಸುತ್ತಿರುವ ಜಿಮ್ಗಳಲ್ಲಿ ಹಿಂದೂ ಯುವತಿಯರನ್ನು ಸೆಳೆದು ಮತಾಂತರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಯುವತಿಯರ ನಗ್ನ ಚಿತ್ರ, ವೀಡಿಯೋಗಳನ್ನು ಮಾಡಿ ಬೆದರಿಸುವ ಕೆಲಸ ನಡೆಯುತ್ತಿದೆ. ಇದಕ್ಕಾಗಿ ಬೇರೆಡೆಗಳಿಂದ ಹಣವೂ ಹರಿದು ಬರುತ್ತಿದೆ. ಈ ನಿಟ್ಟಿನಲ್ಲಿ ಕೊಡಗಿನಲ್ಲಿ ನಡೆಯುತ್ತಿರುವ ಅನ್ಯಕೋಮಿನ ಜಿಮ್ಗಳನ್ನು ಪರಿಶೀಲಿಸಿ ಎಚ್ಚರಿಕೆ ನೀಡುವ ಕೆಲಸವಾಗಬೇಕು. ಮಹಿಳೆಯರಿಗೆ ಮಹಿಳಾ ತರಬೇತುದಾರರಿಂದಲೇ ತರಬೇತಿ ಕೊಡಿಸುವಂತಾಗಬೇಕು ಎಂದರು.
ಇಂತಹ ಕೃತ್ಯವನ್ನು ಪ್ರಶ್ನಿಸಿದರೆ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಕೆಲಸವಾಗುತ್ತಿದೆ. ಈ ರೀತಿಯ ಬೆದರಿಕೆಗೆ ಹಿಂದೂ ಕಾರ್ಯಕರ್ತರು ಜಗ್ಗುವುದಿಲ್ಲ ಎಂದು ಹೇಳಿದರು.
ಜಿ.ಪಂ. ಮಾಜಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂಗಳ ಮೇಲೆ ದಾಳಿ ನಡೆಯುತ್ತಲೇ ಇರುತ್ತದೆ. ಹಿಂದೂ ಪರ ಸರಕಾರ ರಾಜ್ಯದಲ್ಲಿ ಬರಬೇಕು. ಹಿಂದೂಗಳು ಒಂದಾಗದಿದ್ದಲ್ಲಿ ಅಸ್ತಿತ್ವ ಕಳೆದುಕೊಳ್ಳಬೇಕಾಗುತ್ತದೆ. ಈಗಾಗಲೇ ಕೊಡಗಿನ ಗಡಿಗಳು ಬೇರೆಯವರ ಪಾಲಾಗುತ್ತಿದೆ. ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ರಮೇಶ್ ಪುದಿಯೊಕ್ಕಡ, ಕಾರ್ಯದರ್ಶಿ ಸಂತೋಷ್, ಚೇತನ್ ಶಾಂತಿನಿಕೇತನ, ಬಜರಂಗದಳ ಸಹ ಸಂಯೋಜಕ ದುರ್ಗೇಶ್ ಭಜರಂಗಿ, ಮುಕುಂದ್, ನಗರ ಸಂಯೋಜಕ ಚರಣ್ ಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.