ಮಡಿಕೇರಿ ಏ.೨೪ : ಕೊಡವರ ಹೊಸವರ್ಷ ಎಡಮ್ಯಾರ್ ಮಾಸಿಕ ಸ್ಮರಣಾರ್ಥ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನಲ್ಲಿ ಹಿರಿಯರಿಗೆ ಪುಷ್ಪನಮನ ಸಲ್ಲಿಸಿತು.
ದೇವಟ್ ಪರಂಬುವಿಗೆ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಭೇಟಿ ನೀಡಿದ ಸದಸ್ಯರು ಹಿರಿಯರನ್ನು ಸ್ಮರಿಸಿ ಪುಷ್ಪನಮನ ಅರ್ಪಿಸಿದರು.
ಈ ಸಂದರ್ಭ ಮಾತನಾಡಿದ ಎನ್.ಯು. ನಾಚಪ್ಪ ವೆನಿಸ್ ಚಾರ್ಟರ್ ೧೯೬೪ರ ವಿಧಿ ೭ ಮತ್ತು ಭಾರತೀಯ ಸಂವಿಧಾನದ ವಿಧಿ ೪೯ರ ಅಡಿಯಲ್ಲಿ ದೇವಟ್‌ಪರಂಬ್ ಹತ್ಯಾಕಾಂಡ ಸ್ಥಳದಲ್ಲಿ "ಅಂತಾರಾಷ್ಟಿçÃಯ ಕೊಡವ ಜನಾಂಗೀಯ ಹತ್ಯಾಕಾಂಡ ಸ್ಮಾರಕ'ವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ದೇವಟ್‌ಪರಂಬ್ ದುರಂತ ಹತ್ಯಾಕಾಂಡವನ್ನು ವಿಶ್ವಸಂಸ್ಥೆಯ ಅಂತರರಾಷ್ಟಿçÃಯ ಹತ್ಯಾಕಾಂಡ ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕು. ಸೂಕ್ಷö್ಮ, ಏಕ-ಜನಾಂಗೀಯ, ಆದಿಮಸಂಜಾತ, ಅನಿಮಿಸ್ಟಿಕ್ ನಂಬುಗೆಯ, ಪ್ರಕೃತಿಯನ್ನು ಆರಾಧಿಸುವ ಕೊಡವ ಯೋಧ ಕುಲಕ್ಕೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ನೀಡಬೇಕು. ಕೊಡವ ಯೋಧ ಕುಲವನ್ನು ಭಾರತೀಯ ಸಂವಿಧಾನದ ಬುಡಕಟ್ಟು ಪಟ್ಟಿಗೆ ಸೇರ್ಪಡೆಗೊಳಿಸಬೇಕು. ವಿಶ್ವರಾಷ್ಟç ಸಂಸ್ಥೆಯ ಆದಿಮಸಂಜಾತ ಜನರ ಆಸ್ತಿ ಮರುಪಡೆಯುವಿಕೆ ಕಾನೂನಿನ ಅಡಿಯಲ್ಲಿ ಕೊಡವರ ವಂಶಪಾರAಪರ್ಯ ಆಸ್ತಿಗಳನ್ನು ಮರಳಿ ಕೊಡವರಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಪಟ್ಟಮಾಡ ಕುಶ, ಮಂದಪAಡ ಮನೋಜ್ ಮಂದಣ್ಣ ಹಾಗೂ ಚೀಯಬೆರ ಸತೀಶ್ ಪಾಲ್ಗೊಂಡು ಸಿಎನ್‌ಸಿ ಬೇಡಿಕೆಗಳಿಗೆ ಬೆಂಬಲ ಸೂಚಿಸಿದರು.