ಮಡಿಕೇರಿ, ಏ. ೨೪: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. ೨೭ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಬೆಂಗಳೂರಿನ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಸಂದರ್ಶನದಲ್ಲಿ ಎಸ್ ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯಥಿ ðಗಳು ಭಾಗವಹಿಸಿ ಉದ್ಯೋಗದ ನೇರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.