ಕುಶಾಲನಗರ, ಏ. ೨೪: ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ತನ್ನ ಮನೆಗೆ ತೆರಳುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ವ್ಯಕ್ತಿಯೊಬ್ಬ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಕುಶಾಲನಗರ ಸಮೀಪದ ಕೊಪ್ಪ ಗ್ರಾಮದ ಗುಡ್ಡೆನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಶೃತಿ ಎಂಬ ಮಹಿಳೆ ಕುಶಾಲನಗರದ ಆಸ್ಪತ್ರೆಗೆ ತೆರಳಿ ಗುರುವಾರ ರಾತ್ರಿ ಸುಮಾರು ೯ ಗಂಟೆಗೆ ಕೊಪ್ಪ ಭಾರತ ಮಾತಾ ಪದವಿ ಕಾಲೇಜಿನ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಪಲ್ಸರ್ ಬೈಕ್ನಲ್ಲಿ ಬಂದ ಆಗಂತುಕ ಮಹಿಳೆಯನ್ನು ಅಡ್ಡಹಾಕಿ ಬೆದರಿಸಿ ಸುಮಾರು ೧೦ ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾನೆ ಎಂದು ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ಸಂಬAಧ ಸರ ಕಸಿದು ಪರಾರಿಯಾಗಿರುವ ವ್ಯಕ್ತಿಯ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ರವಿಕುಮಾರ್ ತಿಳಿಸಿದ್ದಾರೆ. ಸುತ್ತಮುತ್ತ ವ್ಯಾಪ್ತಿಯ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.