ಕುಶಾಲನಗರ, ಏ. ೨೪: ಕುಶಾಲನಗರ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಪಟ್ಟಣ ಮತ್ತು ಸುತ್ತಮುತ್ತಲ ವ್ಯಾಪ್ತಿಯ ಹೋಂ ಸ್ಟೇಗಳು, ರೆಸಾರ್ಟ್ ಮಾಲೀಕರ ಸಭೆ ನಡೆಯಿತು. ಇತ್ತೀಚೆಗೆ ಕುಟ್ಟ ಗ್ರಾಮದ ಹೋಂಸ್ಟೇಯಲ್ಲಿ ನಡೆದ ಪ್ರಕರಣದ ಹಿನ್ನೆಲೆಯಲ್ಲಿ ರೆಸಾರ್ಟ್ ಹೋಂ ಸ್ಟೇಗಳ ಮಾಲೀಕರು ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸುವುದು, ಯಾವುದೇ ಕಾನೂನು ಬಾಹಿರ, ನಿಯಮ ಬಾಹಿರವಾಗಿ ಚಟುವಟಿಕೆಗಳನ್ನು ನಡೆಸದಂತೆ ಸೂಚನೆ ನೀಡಲಾಯಿತು. ಪ್ರವಾಸಿಗರ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸಲಹೆ ನೀಡಲಾಯಿತು. ತಪ್ಪಿದಲ್ಲಿ ಸೂಕ್ತ ಕಾನೂನು ಕ್ರಮ ಜರಗಿಸುವುದಾಗಿ ಎಚ್ಚರಿಕೆ ನೀಡಿದರು. ಕುಶಾಲನಗರ ಪೊಲೀಸ್ ಇನ್ಸ್ಪೆಕ್ಟರ್ ಪ್ರದೀಪ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ದಿನೇಶ್ ಕುಮಾರ್, ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಪಟ್ಟಣ ಹಾಗೂ ಸುತ್ತುಮುತ್ತಲಿನ ಹೋಂಸ್ಟೇ, ರೆಸಾರ್ಟ್ಗಳ ಮಾಲೀಕರು ಇದ್ದರು.