ಮಡಿಕೇರಿ, ಏ. ೨೫: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮಂಡಿಸಿದ ನೂತನ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದ ವಿಪಕ್ಷಗಳ ನಡೆ ಖಂಡನೀಯ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಭಾರತದ ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸುವಲ್ಲಿ ಮಹಿಳೆಯರ ಪಾತ್ರ ಮತ್ತು ಕೊಡುಗೆ ಅಪಾರವಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಪ್ರಧಾನಿಗಳು ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದರು. ವೈಯಕ್ತಿಕ ಹಾಗೂ ರಾಜಕೀಯ ವಿಚಾರಗಳನ್ನು ಬದಿಗಿಟ್ಟು ಈ ದೇಶದ ಒಳಿತಿಗಾಗಿ ಈ ಮಸೂದೆಯನ್ನು ಅಂಗೀಕಾರ ಮಾಡೋಣ ಎಂದು ಪ್ರಧಾನಿಗಳು ಮನವಿ ಮಾಡಿದ್ದರು. ಆದರೂ ಈ ಮಸೂದೆಯನ್ನು ವಿಪಕ್ಷಗಳು ಬೆಂಬಲಿಸದಿರುವುದು ವಿಷಾದನೀಯ. ೨/೩ ರಷ್ಟು ನಿಚ್ಚಳ ಬಹುಮತವಿಲ್ಲದಿದ್ದರೂ ಕೂಡ ಈ ದೇಶದ ಹಿತದೃಷ್ಟಿಯಿಂದ ವಿಪಕ್ಷಗಳು ಈ ಮಸೂದೆಯನ್ನು ಬೆಂಬಲಿಸುತ್ತವೆ ಎಂಬ ಭಾವನೆ ಬಿಜೆಪಿಗಿತ್ತು. ಆದರೆ, ಸಹಕಾರ ನೀಡಲಿಲ್ಲ ಎಂದು ಯದುವೀರ್ ನುಡಿದರು.
ಕೇಂದ್ರ ಸಕರಾರ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ನೀಡಿದೆ. ಕೇಂದ್ರ ಸರಕಾರದ ಯೋಜನೆಗಳ ಲಾಭವನ್ನು ಮಹಿಳೆಯರೆ ಹೆಚ್ಚಾಗಿ ಪಡೆಯುತ್ತಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಸಂಬAಧ ಹೋರಾಟ ಹಾಗೂ ಪ್ರಯತ್ನ ಮುಂದುವರೆಯಲಿದೆ ಎಂದು ಸಂಸದರು ತಿಳಿಸಿದರು. ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಕೊಡಗಿಗೂ ಪ್ರತ್ಯೇಕ ಪ್ರಾತಿನಿಧ್ಯ ಬೇಕು ಎಂಬ ಬೇಡಿಕೆ ಈ ಹಿಂದಿನಿAದಲೂ ಇದೆ. ಕ್ಷೇತ್ರ ಪುನರ್ವಿಂಗಣೆ ಆಗಿದ್ದರೆ ಕೊಡಗು ಜಿಲ್ಲೆ ಕೂಡ ಪ್ರತ್ಯೇಕ ಪ್ರಾತಿನಿಧ್ಯ ಪಡೆಯುವ ಸಾಧ್ಯತೆ ಇತ್ತು ಎಂದು ಯದುವೀರ್ ಒಡೆಯರ್ ಹೇಳಿದರು.
ಕೇಂದ್ರ ಸರಕಾರ ಯಾವುದೇಯೋಜನೆ ಜಾರಿಗೆ ಮುಂದಾದರೂ ತಾಂತ್ರಿಕ ಅಂಶಗಳನ್ನು ಮುಂದಿಟ್ಟುಕೊAಡು ಯೋಜನೆಗಳಿಗೆ ಅಡ್ಡಿಪಡಿಸುವುದೇ ಕಾಂಗ್ರೆಸ್‌ನ ಕೆಲಸವಾಗಿದೆ. ಕ್ಷೇತ್ರ ಪುನರ್ವಿಂಗಣೆಗೆ ಬೆಂಬಲ ನೀಡದ ವಿಪಕ್ಷಗಳ ನಿಲುವು ಖಂಡನೀಯ ಎಂದು ಸಂಸದರು ನುಡಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ರೀನಾ ಪ್ರಕಾಶ್ ಮಾತನಾಡಿ, ೭೦ ಕೋಟಿ ಮಹಿಳೆಯರ ಕನಸನ್ನು ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ನುಚ್ಚುನೂರು ಮಾಡಿವೆ. ಮಹಿಳಾ ಮೀಸಲಾತಿ ಬಗ್ಗೆ ಇಂದಿರಾ ಗಾಂಧಿ ಕೂಡ ಚಿಂತಿಸಿರಲಿಲ್ಲ. ಇದೀಗ ಮೋದಿ ಅವರು ಮಹಿಳಾ ಮೀಸಲಾತಿ ಜಾರಿಗೆ ಮುಂದಾದರೂ ಕೂಡ ಅದನ್ನು ವಿಪಕ್ಷಗಳು ವಿರೋಧಿಸುವ ಮೂಲಕ ಮಹಿಳೆಯರಿಗೆ ಅನ್ಯಾಯ ಮಾಡಿವೆ ಎಂದು ಆಪಾದಿಸಿದರು.
ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಕಾಂಗ್ರೆಸ್ ಕೇವಲ ಓಟ್ ಬ್ಯಾಂಕ್‌ಗಾಗಿ ಮಾತ್ರ ಮಹಿಳೆಯರನ್ನು ಬಳಸಿಕೊಂಡು ಮಹಿಳೆಯರಿಗೆ ದ್ರೋಹವೆಸಗಿದೆ ಎಂದು ಆರೋಪಿಸಿದರು.
ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಯಮುನಾ ಚಂಗಪ್ಪ, ನಗರಸಭಾ ಅಧ್ಯಕ್ಷೆ ಕಲಾವತಿ, ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಎಂ. ರವಿ ಮತ್ತಿತರರು ಇದ್ದರು.
ಸರಕಾರದ ಸ್ಪಂದನ ಇಲ್ಲ
ಕುಶಾಲನಗರ-ಮೈಸೂರು ರೈಲು ಯೋಜನೆಗೆ ಸಂಬAಧಿಸಿದAತೆ ರಾಜ್ಯ ಸರಕಾರ ಭೂಸ್ವಾಧೀನ ಪ್ರಕ್ರಿಯೆ ಮಾಡಿದರೆ ಯೋಜನೆ ಜಾರಿಗೆ ಕೇಂದ್ರ ಸಿದ್ಧವಿದೆ. ಆದರೆ, ರಾಜ್ಯ ಸರಕಾರ ಪ್ರಕ್ರಿಯೆ ಸಂಬAಧ ಹಣ ಇಲ್ಲ ಎಂದು ಪತ್ರ ಬರೆದಿದ್ದು, ಸೂಕ್ತ ಸ್ಪಂದನ ನೀಡಿಲ್ಲ ಎಂದು ಯದುವೀರ್ ಹೇಳಿದರು.
ಕುಟ್ಟದಲ್ಲಿ ನಡೆದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬAಧ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಸಂಸದರು, ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದರಲ್ಲದೆ ಇಂತಹ ಘಟನೆಗಳಿಂದ ಪ್ರವಾಸೋದ್ಯಮಕ್ಕೂ ಹಿನ್ನಡೆ ಆಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.